ಓದುಗರ ಪತ್ರ

ಓದುಗರ ಪತ್ರ|ಪೆಟ್ರೋಲ್ ಕಳ್ಳತನಕ್ಕೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಕೆಲ ವರ್ಷಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್ ಕಳ್ಳರ ಹಾವಳಿ ಮತ್ತೆ ಹೆಚ್ಚಾಗಿದ್ದು, ಮನೆಯ ಮುಂಭಾಗಗಳಲ್ಲಿ ನಿಲ್ಲಿಸುವ ಬೈಕ್ ಗಳಲ್ಲಿ ನಿತ್ಯ ಪೆಟ್ರೋಲ್ ಕಳ್ಳತನವಾಗುತ್ತಿದೆ. ನಗರದ ವಿಜಯನಗರ ರೈಲ್ವೆ ಬಡಾವಣೆಯ 10ನೇ ಕ್ರಾಸ್‌ನ ಮನೆಗಳ ಮುಂದೆ ನಿಲ್ಲಿಸುವ ಬೈಕ್‌ಗಳ ಪೆಟ್ರೋಲ್ ಪೈಪನ್ನೇ ಕತ್ತರಿಸಿ ಕಳ್ಳರು ಪೆಟ್ರೋಲ್ ಕದಿಯುತ್ತಿದ್ದಾರೆ. ಇತ್ತೀಚೆಗೆ ಈ ಬಡಾವಣೆಗಳಲ್ಲಿ ಪೊಲೀಸ್ ಗಸ್ತು ತಿರುಗುವುದು ಕಡಿಮೆಯಾಗಿದ್ದು, ಕಳ್ಳರ ಹಾವಳಿ ಹೆಚ್ಚಾಗಲು ಕಾರಣವಾಗಿದೆ. ಕಳ್ಳರು ಯಾವುದೇ ಅಂಜಿಕೆ ಇಲ್ಲದೆ ಪೆಟ್ರೋಲ್ ಕದ್ದು ಪರಾರಿಯಾಗುತ್ತಿದ್ದಾರೆ.

ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮುಂದಿನ ದಿನಗಳಲ್ಲಿ ಮನೆಗಳ್ಳತನ ಅಥವಾ ಸರಗಳತಗಳಾಗಬಹುದು ಎಂಬ ಆತಂಕ ಶುರುವಾಗಿದೆ. ಆದ್ದರಿಂದ ಸಂಬಂಧಪಟ್ಟ ಪೊಲೀಸ್ ಠಾಣೆಯವರು ಈ ಭಾಗದಲ್ಲಿ ಗಸ್ತು ತಿರುಗುವ ಮೂಲಕ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಬೇಕಿದೆ.

– ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

1 hour ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

2 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

2 hours ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

2 hours ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

10 hours ago