ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮದ್ಯದ ಬಾಟಲಿಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಅಂತರಸಂತೆ ಗ್ರಾಮದ ಸರ್ಕಾರಿ ಶಾಲಾ-ಕಾಲೇಜು ಆವರಣದಲ್ಲಿ ಸಂಜೆಯಾಗುತ್ತಲೇ ಮದ್ಯದ ಕೂಟಗಳು ಆರಂಭವಾಗುತ್ತವೆ. ಕೆಲ ಮದ್ಯವ್ಯಸನಿಗಳು ಕಾಲೇಜಿನ ಕಾರಿಡಾರಿನಲ್ಲಿಯೇ ಕುಳಿತು ಮದ್ಯಪಾನ ಮಾಡುತ್ತಿದ್ದು, ಬಳಿಕ ಬಾಟಲಿ, ಪ್ಲಾಸ್ಟಿಕ್ ಕವರ್ ಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದಾರೆ. ಇದರಿಂದಾಗಿ ಕಾಲೇಜು ಆವರಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಕಾಲೇಜು ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಎಂದು ಸಾಕಷ್ಟು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಮುಂದಾದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಶಾಲಾ-ಕಾಲೇಜು ಆವರಣದಲ್ಲಿ ಮದ್ಯವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ. -ಕಾರ್ತಿಕ್, ಎಚ್. ಡಿ. ಕೋಟೆ ತಾ.





