ಓದುಗರ ಪತ್ರ

ಓದುಗರ ಪತ್ರ | ಹಿನ್ನೀರುಗಳಲ್ಲಿನ ಮೋಜಿನ ಕೂಟಕ್ಕೆ ಕಡಿವಾಣ ಹಾಕಿ

ಹೊಸ ವರ್ಷ ಬಂತು ಎಂದರೆ ಸಾಕು ಯುವ ಸಮೂಹ ಮೋಜು- ಮಸ್ತಿಯ ಕೂಟಗಳಲ್ಲಿ ಮುಳುಗಿ ಬಿಡುತ್ತದೆ. ಈ ಮೋಜಿನ ಕೂಟಗಳು ರೆಸ್ಟೋರೆಂಟ್, ಹೊಟೇಲ್, ಪಬ್‌ಗಳಲ್ಲಿ ನಡೆದರೆ ಸರಿ. ಆದರೆ ಕೆಲವರು ಜಲಾಶಯಗಳ ಹಿನ್ನೀರಿನಲ್ಲಿ ಮದ್ಯದ ಕೂಟಗಳನ್ನು ಆಯೋಜಿಸಿಕೊಂಡು ಹಿನ್ನೀರಿನ ಪ್ರದೇಶಗಳನ್ನು ಅನೈರ್ಮಲ್ಯ ಮಾಡುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಬೇಕಿದೆ.

ಡಿ. ೩೧ರ ರಾತ್ರಿ ಬಹುತೇಕ ಮಂದಿ ಹೊಸ ವರ್ಷದ ಆಚರಣೆಗಳನ್ನು ಕಬಿನಿ, ತಾರಕ, ಕೆಆರ್‌ಎಸ್ ಹಿನ್ನೀರುಗಳಲ್ಲಿ ಮಾಡುತ್ತಿದ್ದು, ಮದ್ಯದ ಕೂಟಗಳನ್ನು ಆಯೋಜಿಸಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಈ ವೇಳೆ ಮದ್ಯಪಾನ ಮಾಡುವ ಜತೆಗೆ ಅಲ್ಲಿಯೇ ಅಡುಗೆ ಮಾಡಿ ಊಟ ಮಾಡುತ್ತಾರೆ. ಪಾರ್ಟಿ ಮಾಡುವುದರಿಂದ ಏನೂ ಸಮಸ್ಯೆ ಇಲ್ಲ. ಆದರೆ ಪಾರ್ಟಿ ಮುಗಿದ ಬಳಿಕ ಉಳಿದ ಆಹಾರ ಪದಾರ್ಥಗಳು, ಅದರ ಪ್ಲಾಸ್ಟಿಕ್ ಕವರ್‌ಗಳು ಹಾಗೂ ಬಾಟಲಿಗಳಂಥ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬೀಸಾಡಿ ಹೋಗುತ್ತಿದ್ದು, ಇದರಿಂದಾಗಿ ಹಿನ್ನೀರಿನಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಕೆಲವರು ಕುಡಿದ ಮತ್ತಿನಲ್ಲಿ ಗಲಾಟೆಗಳನ್ನು ಮಾಡಿಕೊಂಡು ಅನಾಹುತ ಸಂಭವಿಸುವ ಅಪಾಯವೂ ಇದೆ. ಆದ್ದರಿಂದ ಪೊಲೀಸ್ ಇಲಾಖೆಯು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಿ, ಹಿನ್ನೀರಿನ ಪ್ರದೇಶಗಳಲ್ಲಿ ಹೊಸ ವರ್ಷದ ನೆಪದಲ್ಲಿ ನಡೆಯುವ ಮೋಜಿನ ಕೂಟಗಳಿಗೆ ಕಡಿವಾಣ ಹಾಕಬೇಕಿದೆ. -ಸಂಜಯ್, ಶ್ರೀರಾಂಪುರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

4 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago