Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ಓದುಗರ ಪತ್ರ | ರಸ್ತೆ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಕೆಎಸ್‌ಆರ್‌ಟಿಸಿ ಬಸ್‌ಗಳೂ ಡಿಪೋಗೆ ಹೋಗುವಾಗ ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ವಾಹನ ದಟ್ಟಣೆ ಹೆಚ್ಚಿರುವ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸುವ ಅಪಾಯವಿದೆ. ಅಲ್ಲದೆ ರಾತ್ರಿ ವೇಳೆ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಸದ್ಯ ಈ ರಸ್ತೆಯಲ್ಲಿ ಸಂಚರಿ ಸುವ ಸವಾರರು ಹೈರಾಣಾಗಿದ್ದು, ಮುಖ್ಯ ರಸ್ತೆಯ ಸ್ಥಿತಿಯೇ ಹೀಗಾದರೆ ಬೇರೆ ರಸ್ತೆಗಳ ಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ. ಈ ಬಗ್ಗೆ ಅಽಕಾರಿ ಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಽಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

Tags:
error: Content is protected !!