ಮೈಸೂರಿನ ಕುವೆಂಪು ನಗರದ ಮುಖ್ಯ ರಸ್ತೆಯಾದ ನೃಪತುಂಗ ರಸ್ತೆ ಯಲ್ಲಿ ಕುವೆಂಪುನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ವರೆಗಿನ ಸುಮಾರು ಎರಡು ಫರ್ಲಾಂಗ್ ದೂರದ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಈ ರಸ್ತೆಯು ಕುವೆಂಪುನಗರದ ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಕೆಎಸ್‌ಆರ್‌ಟಿಸಿ ಬಸ್‌ಗಳೂ ಡಿಪೋಗೆ ಹೋಗುವಾಗ ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ವಾಹನ ದಟ್ಟಣೆ ಹೆಚ್ಚಿರುವ ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಸವಾರರು ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸುವ ಅಪಾಯವಿದೆ. ಅಲ್ಲದೆ ರಾತ್ರಿ ವೇಳೆ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ. ಸದ್ಯ ಈ ರಸ್ತೆಯಲ್ಲಿ ಸಂಚರಿ ಸುವ ಸವಾರರು ಹೈರಾಣಾಗಿದ್ದು, ಮುಖ್ಯ ರಸ್ತೆಯ ಸ್ಥಿತಿಯೇ ಹೀಗಾದರೆ ಬೇರೆ ರಸ್ತೆಗಳ ಸ್ಥಿತಿ ಏನು ಎಂದು ಪ್ರಶ್ನಿಸುವಂತಾಗಿದೆ. ಈ ಬಗ್ಗೆ ಅಽಕಾರಿ ಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಮಹಾನಗರ ಪಾಲಿಕೆಯ ಅಽಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…