ಓದುಗರ ಪತ್ರ| ಜಮೀರ್‌ರನ್ನು ಸಂಪುಟದಿಂದ ವಜಾಗೊಳಿಸಿ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಬಹಿರಂಗ ಪ್ರಚಾರದ ವೇಳೆ ‘ಮುಸ್ಲಿಂ ಸಮುದಾಯದವರು ಒಂದೊಂದು ರೂಪಾಯಿ ಸಂಗ್ರಹಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇ ಗೌಡ ಕುಟುಂಬವನ್ನು ಖರೀದಿ ಮಾಡುತ್ತೇವೆ’ ಎಂದು ವ್ಯಂಗ್ಯವಾಡಿದ್ದ ಸಚಿವ ಜಮೀರ್ ಅಹಮದ್‌ ಖಾನ್, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಯವರನ್ನು ‘ಕರಿಯ’ ಎಂದು ಕರೆಯುವ ಮೂಲಕ ಉದ್ಧಟತನ ಪ್ರದರ್ಶಿಸಿದ್ದಾರೆ.

ಇದೊಂದು ಅಧಿಕಾರ ಅಮಲು ಮತ್ತು ದುರಹಂಕಾರದ ಪರಮಾವಧಿ ಎಂದೇ ಹೇಳಬಹುದು. ಜವಾಬ್ದಾರಿಯುತ ಸ್ಥಾನದಲ್ಲಿರುವ ಜಮೀರ್‌ಗೆ ಸಾರ್ವಜನಿಕ ಸ್ಥಳಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಸೌಜನ್ಯವೇ ಇಲ್ಲದಿರುವುದು ಬೇಸರದ ಸಂಗತಿ. ಕಳೆದ ವರ್ಷವೂ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಟ್ಟುಕೊಂಡು ಒಕ್ಕಲಿಗ ಸಮುದಾಯದ ಬಗ್ಗೆ ಲಘುವಾಗಿ ಮಾತನಾಡಿದ್ದರು. ಬಳಿಕ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದರು. ರಾಜ್ಯದಲ್ಲಿ ಎಲ್ಲ ಸಮುದಾಯದವರೂ ಸಹಬಾಳ್ವೆಯಿಂದ ಇರುವಾಗ ಜಮೀರ್‌ನಂತಹ ಕೆಲವು ನಾಯಕರು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿರುವುದು ಖಂಡನೀಯ. ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟದ ಸದಸ್ಯರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವುದನ್ನು ಬಿಟ್ಟುಅವರಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಿಷ್ಟೇ ಅಲ್ಲದೆ ಈಗ ನ್ಯಾಯಾಂಗ ವ್ಯವಸ್ಥೆಯ ಬಗ್ಗೆಯೂ ಕೆಲ ನಾಯಕರು ಹಗುರವಾಗಿ ನಾಲಿಗೆ ಹರಿಬಿಡುತ್ತಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

7 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

8 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

10 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

11 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

13 hours ago