ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಆದರೆ, ಈ ರಸ್ತೆಗೆ ಈಗಾಗಲೇ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರಿದೆ. ರಾಜಕೀಯ ಕಾರಣಕ್ಕಾಗಿ ಈಗ ಆ ರಸ್ತೆಯ ಹೆಸರು ಬದಲಾವಣೆ ಮಾಡುವುದು ಎಷ್ಟು ಸರಿ? ಹಿಂದೆಲ್ಲಾ ಸಾಧಕ ವ್ಯಕ್ತಿಗಳು ಸಾವನ್ನಪ್ಪಿದ ಬಳಿಕ ಅವರ ಸ್ಮರಣಾರ್ಥವಾಗಿ ಅವರ ಹೆಸರುಗಳನ್ನು ರಸ್ತೆಗಳಿಗೆ, ಉದ್ಯಾನವನಗಳಿಗೆ ಹಾಗೂ ವೃತ್ತಗಳಿಗೆ ಇಡಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಬದುಕಿರುವ ವ್ಯಕ್ತಿಗಳ ಹೆಸರುಗಳನ್ನು ರಸ್ತೆಗಳಿಗೆ ಇಡುವ ಪರಿಪಾಠ ಶುರುವಾಗಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅದರ ಬಗ್ಗೆ ಎರಡು ಮಾತಿಲ್ಲ. ಅವರ ಆಡಳಿತಾವಽಯಲ್ಲಿ ಮೈಸೂರಿನಲ್ಲಿ ಆಸ್ಪತ್ರೆಗಳು ಹಾಗೂ ಶಿಕ್ಷಣ ಸಂಸ್ಥೆಗಳೂ ಸ್ಥಾಪನೆಯಾಗಿವೆ. ರೈತರ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದಾರೆ. ಅದನ್ನು ಸ್ಮರಿಸಬೇಕು. ಆದರೆ, ಅದಕ್ಕಾಗಿ ರಸ್ತೆಯೊಂದಕ್ಕೆ ಈಗಿರುವ ಹೆಸರನ್ನು ತೆಗೆದು ಅವರ ಹೆಸರನ್ನು ಮರನಾಮಕರಣ ಮಾಡುವುದು ಅಷ್ಟೇನೂ ಸರಿ ಕಾಣದು.
-ಕೆ.ವಿ.ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…