ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ನಿಷೇಧ ಎಂಬ ಬೋರ್ಡ್‌ಗಳನ್ನು ಹಾಕಿರುವುದು ಕಂಡು ಬಂದಿದ್ದು, ಇದು ಶ್ರೀಮಂತರ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಒಂದೆಡೆ ಕಟ್ಟಡದ ಮಾಲೀಕರ ಅಮಾನವೀಯ ನಿಯಮಗಳು, ಇನ್ನೊಂದೆಡೆ ಹೇಗಾದರೂ ಮಾಡಿ ಮೇಲೆ ಬನ್ನಿ ಎಂದು ಹಠ ಹಿಡಿಯುವ ಕಲ್ಲುಹೃದಯದ ಗ್ರಾಹಕರು. ಹಸಿದವನಿಗೆ ಅನ್ನ ನೀಡುವವನನ್ನು ಮೆಟ್ಟಿಲು ಹತ್ತಿಸುವುದು ಯಾವ ನ್ಯಾಯ? ನಾವು ತಾಂತ್ರಿಕವಾಗಿ ಮುಂದುವರಿದಿರಬಹುದು, ಆದರೆ ಸಾಂಸ್ಕೃತಿಕವಾಗಿ ಅಧಃಪತನ ಹೊಂದುತ್ತಿದ್ದೇವೆ. ಇಂತಹ ಶೋಷಣೆಯ ವಿರುದ್ಧ ಧ್ವನಿ ಎತ್ತದಿದ್ದರೆ, ನಮ್ಮದು ನಾಗರಿಕ ಸಮಾಜ ಎಂದು ಕರೆದುಕೊಳ್ಳಲು ಅನರ್ಹರು. ಇಂದೇ ಈ ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ.
-ಡಾ. ಎಚ್. ಕೆ. ವಿಜಯಕುಮಾರ, ಬೆಂಗಳೂರು
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…