ಓದುಗರ ಪತ್ರ

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ನಿಷೇಧ ಎಂಬ ಬೋರ್ಡ್‌ಗಳನ್ನು ಹಾಕಿರುವುದು ಕಂಡು ಬಂದಿದ್ದು, ಇದು ಶ್ರೀಮಂತರ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಒಂದೆಡೆ ಕಟ್ಟಡದ ಮಾಲೀಕರ ಅಮಾನವೀಯ ನಿಯಮಗಳು, ಇನ್ನೊಂದೆಡೆ ಹೇಗಾದರೂ ಮಾಡಿ ಮೇಲೆ ಬನ್ನಿ ಎಂದು ಹಠ ಹಿಡಿಯುವ ಕಲ್ಲುಹೃದಯದ ಗ್ರಾಹಕರು. ಹಸಿದವನಿಗೆ ಅನ್ನ ನೀಡುವವನನ್ನು ಮೆಟ್ಟಿಲು ಹತ್ತಿಸುವುದು ಯಾವ ನ್ಯಾಯ? ನಾವು ತಾಂತ್ರಿಕವಾಗಿ ಮುಂದುವರಿದಿರಬಹುದು, ಆದರೆ ಸಾಂಸ್ಕೃತಿಕವಾಗಿ ಅಧಃಪತನ ಹೊಂದುತ್ತಿದ್ದೇವೆ. ಇಂತಹ ಶೋಷಣೆಯ ವಿರುದ್ಧ ಧ್ವನಿ ಎತ್ತದಿದ್ದರೆ, ನಮ್ಮದು ನಾಗರಿಕ ಸಮಾಜ ಎಂದು ಕರೆದುಕೊಳ್ಳಲು ಅನರ್ಹರು. ಇಂದೇ ಈ ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ.
-ಡಾ. ಎಚ್. ಕೆ. ವಿಜಯಕುಮಾರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago