ಮೈಸೂರಿನಲ್ಲಿ, ದಿನದಿಂದ ದಿನಕ್ಕೆ, ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಮಧ್ಯಾಹ್ನ 12 ಗಂಟೆಯಿಂದ 3ರ ತನಕ ಹೆಚ್ಚು ಓಡಾಡಬೇಡಿ ಎಂದು ಸರ್ಕಾರದ ಪರವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ. ಎಲ್ಲರೂ ಇದನ್ನು ಪಾಲಿಸಲು ಸಾಧ್ಯವೇ ಇಲ್ಲ. ತಮ್ಮ ಸ್ವಂತ ಕೆಲಸ ಕಾರ್ಯಗಳಿಗಾಗಿ ಮಧ್ಯಾಹ್ನ ವೇಳೆಯಲ್ಲೂ ಮನೆಯಿಂದ ಹೊರಗೆ ಹೋಗಬೇಕಾದ ಅನಿವಾರ್ಯತೆ ಇರುತ್ತದೆ.
ಆದರೆ ಬೇಸಿಗೆ ಬಿಸಿಲಿನಲ್ಲೂ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಅನಿವಾರ್ಯವಾಗಿದೆ. ಬಿಸಿಲಿನ ತಾಪಕ್ಕೆ ತಲೆಯಲ್ಲಿ ಬೆವರು ಧಾರಾಕಾರವಾಗಿ ಸುರಿಯುವುದರಿಂದ, ದ್ವಿಚಕ್ರ ವಾಹನ ಓಡಿಸುವುದೇ
ದೊಡ್ಡ ಸಾಹಸದ ಕೆಲಸವಾಗಿದೆ.
ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಬೇಸಿಗೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯ ತನಕ, ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡಲು ಕ್ರಮ
ಕೈಗೊಳ್ಳಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು.





