ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ವೈದ್ಯಕೀಯ ಸೌಲಭ್ಯವನ್ನು ಪಡೆಯುತ್ತಾರೆ. ಇವರಿಗೆ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ಸೌಲಭ್ಯಗಳು ಆಸ್ಪತ್ರೆ ಆವರ
ಣದಲ್ಲಿಯೇ ಸಿಗುವಂತೆ ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮೆಡಿಕಲ್‌ಗಳು, ಸ್ಕ್ಯಾನಿಂಗ್ ಉಪಕರಣಗಳು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಸೂಕ್ತ ವೈದ್ಯಕೀಯ ಆರೈಕೆಯೇ ಸಿಗದೆ ಅವರು ಖಾಸಗಿ ಆಸ್ಪತ್ರೆಗಳಮೊರೆಹೋಗುವಂತಾಗಿದೆ.
ಸರ್ಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಹಾಪ್‌ಕಾಮ್ಸ್‌ಗಳ ಮೂಲಕ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ಮತ್ತು ಹಣ್ಣು-ಹಂಪಲುಗಳನ್ನು ಪೂರೈಕೆ ಮಾಡುತ್ತಿದೆ. ಇಂತಹ ವ್ಯವಸ್ಥೆಯನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿಯೂ ಕಲ್ಪಿಸಿದರೆ ರೋಗಿಗಳಿಗೆ ಗುಣಮಟ್ಟದ ಆಹಾರ ಹಾಗೂ ರಿಯಾಯಿತಿ ದರದಲ್ಲಿ ಹಣ್ಣುಗಳು ಲಭ್ಯವಾಗಲಿವೆ. ರೋಗಿಗಳು ಆಹಾರ, ಹಣ್ಣಿಗಾಗಿ ಆಸ್ಪತ್ರೆಯಿಂದ ಹೊರ ಹೋಗುವುದೂ ತಪ್ಪುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ವಿಶೇಷ ಯೋಜನೆ ರೂಪಿಸಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ವಸ್ತುಗಳೂ ಸಿಗುವಂತೆ ವ್ಯವಸ್ಥೆ ಮಾಡಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.





