ಓದುಗರ ಪತ್ರ

ಓದುಗರ ಪತ್ರ | ಆಸ್ಪತ್ರೆಯ ಆವರಣದಲ್ಲಿಯೇ ಅಗತ್ಯ ವಸ್ತುಗಳು ಸಿಗಲಿ

ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರು ವೈದ್ಯಕೀಯ ಸೌಲಭ್ಯವನ್ನು ಪಡೆಯುತ್ತಾರೆ. ಇವರಿಗೆ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ಸೌಲಭ್ಯಗಳು ಆಸ್ಪತ್ರೆ ಆವರ
ಣದಲ್ಲಿಯೇ ಸಿಗುವಂತೆ ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಆದರೆ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮೆಡಿಕಲ್‌ಗಳು, ಸ್ಕ್ಯಾನಿಂಗ್ ಉಪಕರಣಗಳು ಸೇರಿದಂತೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಸೂಕ್ತ ವೈದ್ಯಕೀಯ ಆರೈಕೆಯೇ ಸಿಗದೆ ಅವರು ಖಾಸಗಿ ಆಸ್ಪತ್ರೆಗಳಮೊರೆಹೋಗುವಂತಾಗಿದೆ.

ಸರ್ಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಹಾಪ್‌ಕಾಮ್ಸ್‌ಗಳ ಮೂಲಕ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ಮತ್ತು ಹಣ್ಣು-ಹಂಪಲುಗಳನ್ನು ಪೂರೈಕೆ ಮಾಡುತ್ತಿದೆ. ಇಂತಹ ವ್ಯವಸ್ಥೆಯನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿಯೂ ಕಲ್ಪಿಸಿದರೆ ರೋಗಿಗಳಿಗೆ ಗುಣಮಟ್ಟದ ಆಹಾರ ಹಾಗೂ ರಿಯಾಯಿತಿ ದರದಲ್ಲಿ ಹಣ್ಣುಗಳು ಲಭ್ಯವಾಗಲಿವೆ. ರೋಗಿಗಳು ಆಹಾರ, ಹಣ್ಣಿಗಾಗಿ ಆಸ್ಪತ್ರೆಯಿಂದ ಹೊರ ಹೋಗುವುದೂ ತಪ್ಪುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ವಿಶೇಷ ಯೋಜನೆ ರೂಪಿಸಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಗುಣಮಟ್ಟದ ಚಿಕಿತ್ಸೆಯ ಜತೆಗೆ ಅಗತ್ಯ ವಸ್ತುಗಳೂ ಸಿಗುವಂತೆ ವ್ಯವಸ್ಥೆ ಮಾಡಬೇಕು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

2 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

12 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

12 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

13 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

13 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

13 hours ago