ಖೋ-ಖೋ ವಿಶ್ವಕಪ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಚೈತ್ರಾ ಮೈಸೂರು ಜಿಲ್ಲೆಯವರಾಗಿದ್ದು, ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ.
ಚೈತ್ರಾ ಭಾರತೀಯ ಮಹಿಳಾ ಖೋ-ಖೋ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟುವಾಗಿದ್ದು, ಇವರು ಮೈಸೂರಿನ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು ಎಂಬುದು ಹೆಮ್ಮೆಯ ವಿಚಾರವಾಗಿದೆ. ಗ್ರಾಮೀಣ ಪ್ರತಿಭೆಯಾಗಿರುವ ಚೈತ್ರಾ ಖೋ-ಖೋ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡವನ್ನು ಫೈನಲ್ ತಲುಪಿಸುವ ಜತೆಗೆ ಫೈನಲ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಸರ್ಕಾರ ಇವರ ಸಾಧನೆಯನ್ನು ಗುರುತಿಸಿ ಉನ್ನತ ಸರ್ಕಾರಿ ಹುದ್ದೆಯನ್ನು ನೀಡಿ ಗೌರವಿಸಬೇಕು. ಆ ಮೂಲಕ ಹೆಣ್ಣು ಮಕ್ಕಳು ಕ್ರೀಡೆಯಲ್ಲಿ ಭಾಗಹಿಸಲು ಪ್ರೋತ್ಸಾಹಿಸಬೇಕು. -ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…