Mysore
23
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಓದುಗರ ಪತ್ರ | ಉದ್ಯೋಗ ಗ್ಯಾರಂಟಿ ನೀಡಿ

ಓದುಗರ ಪತ್ರ

ನೆರೆಯ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ೫೫ ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ವರದಿಯಾಗಿದೆ.

ರೇವಂತ್ ರೆಡ್ಡಿಯವರ ಈ ನಡೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷ ತಾನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಖಾಲಿ ಇರುವ ೨. ೫೨ ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷ ಅಽಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದು, ಈವರೆಗೂ ಸರ್ಕಾರಿ ಹುದ್ದೆಗಳ ಭರ್ತಿಗೆ ಮುಂದಾಗಿಲ್ಲ.

ರಾಜ್ಯಾದ್ಯಂತ ಲಕ್ಷಾಂತರ ಯುವಕರು ಸರ್ಕಾರಿ ಹುದ್ದೆ ಪಡೆದುಕೊಳ್ಳುವ ಸಲುವಾಗಿ ಹಗಲು ರಾತ್ರಿ ಎನ್ನದೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲು ಹಿಂದೇಟು ಹಾಕುತ್ತಿರುವುದು ನಿರುದ್ಯೋಗ ಸಮಸ್ಯೆ ಉಲ್ಬಣಿಸುವಂತೆ ಮಾಡಿದೆ. ಇತ್ತ ಸರ್ಕಾರಿ ಉದ್ಯೋಗದ ತಯಾರಿ ನಡೆಸುತ್ತಿರುವವರಿಗೆ ವಯೋಮಿತಿ ಮೀರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಗ್ಯಾರಂಟಿ ಯೋಜನೆಗಳ ಮಾದರಿಯಲ್ಲಿಯೇ ಉದ್ಯೋಗ ಗ್ಯಾರಂಟಿಯನ್ನು ಕಲ್ಪಿಸಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದೆ. -ಅನಿಲ್ ಕುಮಾರ್, ನಂಜನಗೂಡು.

Tags:
error: Content is protected !!