ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಸಾರ್ವಜನಿಕರಿಗೆ ತಮ್ಮ ತಮ್ಮ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶವಿಲ್ಲದಿರುವಾಗ ಕೇರಳ ರಾಜ್ಯದ ಸಿನಿಮಾ ಚಿತ್ರೀಕರಣ ತಂಡದವರಿಗೆ ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಕಲ್ಪಿಸಿರುವುದು ಬೇಸರದ ಸಂಗತಿ.
ಗೋಪಾಲಸ್ವಾಮಿ ಬೆಟ್ಟದಲ್ಲಿ ಆನೆಗಳು ಹೆಚ್ಚಾಗಿ ವಿಹರಿಸುತ್ತವೆ. ಸಿನಿಮಾ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಾಣಿ ಪಕ್ಷಿಗಳಿಗೆ ತೊಂದರೆಯಾದರೆ ಯಾರು ಹೊಣೆ? ಈ ಸಂಬಂಧ ಸ್ಥಳೀಯರು, ರೈತ ಮುಖಂಡರು ಸಂಬಂಧಪಟ್ಟ ಅಽಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೆ ಕರೆ ಸ್ವೀಕರಿಸದೇ ಅಸಡ್ಡೆ ತೋರಿದ್ದಾರೆ. ಆದ್ದರಿಂದ ನಿಯಮ ಉಲ್ಲಂಘಿಸಿದ ಅಽಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಮುಂದೆಂದೂ ಇಂತಹಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು





