ಓದುಗರ ಪತ್ರ

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ ಹಾಗೂ ಎಲ್‌ಪಿಜಿ ಅನಿಲ ಸಾಗಣೆ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಿದ್ದರಿಂದ ಆಟೋಗಳಿಗೆ ಸಿಎನ್‌ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆ ಮಾಡುವ ಬಂಕ್‌ಗಳು ಬಂದ್ ಆಗಿದ್ದು, ಆಟೋ ಚಾಲಕರು ಪರದಾಡುವಂತಾಗಿದೆ.

ಆಟೋಗಳಿಗೆ ಸಿಎನ್‌ಐ ಹಾಗೂ ಎಲ್‌ಪಿಜಿ ಇಂಧನ ಪೂರೈಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಪೂರೈಕೆಯಲ್ಲಿ ವ್ಯತ್ಯಯ ವಾಗಿರುವುದನ್ನು ದೃಶ್ಯ ಮಾಧ್ಯಮಗಳು ನಿರಂತರವಾಗಿ ಪ್ರಚಾರ ಮಾಡುವ ಮೂಲಕ ಆಟೋಚಾಲಕರಲ್ಲಿ ಆತಂಕ ಮೂಡಿಸುತ್ತಿವೆ. ತಾವು ಕೆಲವು ವಿದ್ಯುನ್ಮಾನ ಮಾಧ್ಯಮಗಳ ಪ್ರಚೋದನೆಗೆ ಒಳಗಾಗಬೇಡಿ ಪೇಟ್ರೋಲ್, ಡೀಸೆಲ್, ಗ್ಯಾಸ್, ವಿದೇಶದಿಂದ ಬರೋದು ಇವೆಲ್ಲದರ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದಾಗಿದೆ. ಕೇಂದ್ರ ಸರ್ಕಾರ ಸಿಎನ್‌ಜಿ ಹಾಗೂ ಎಲ್‌ಪಿಜಿ ಇಂಧನವನ್ನೇ ನಂಬಿ ಜೀವನ ನಡೆಸುತ್ತಿರುವ ಆಟೋಚಾಲಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಹಾಗೂ ಕೂಡಲೇ ಆಟೋಗಳಿಗೆ ಸಿಎನ್‌ಜಿ ಹಾಗೂ ಎಲ್‌ಪಿಜಿ ಇಂಧನವನ್ನು ಸಕಾಲಕ್ಕೆ ಪೂರೈಸುವ ಮೂಲಕ ಆಟೋ ಚಾಲಕರ ಹಿತ ಕಾಪಾಡುವುದು ಅಗತ್ಯ. -ಪಿ. ರಾಜು, ಅಶೋಕಪುರಂ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago