ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಗ್ಯಾಸ್ ಸಿಲಿಂಡರ್ ವಿತರಿಸುವ ಜವಾಬ್ದಾರಿಯನ್ನು ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ನೀಡಲಾಗಿದೆ. ಆದರೆ ಕೆಲವು ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ ಜನರಿಗೂ ಸ್ಪಂದಿಸುತ್ತಿಲ್ಲ. ರಾವಂದೂರಿನಲ್ಲಿನ ಇಂಥ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಕಾಡುತ್ತಿದೆ.
ಇಲ್ಲಿ ಈವರೆಗೂ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆಯೇ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮೇಲಧಿಕಾರಿಗಳಿಂದ ವಿತರಣೆ ಮಾಡಲು ಯಾವುದೇ ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ ಎಂದು ಸಬೂಬು ನೀಡಿ ಜಾರಿಕೊಂಡಿದ್ದರು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ಗ್ಯಾಸ್ ಸಿಲಿಂಡರ್ ಗಳನ್ನು ವಿತರಣೆ ಮಾಡುವಂತೆ ಸೂಚಿಸಬೇಕಿದೆ.
-ಎ.ಎಸ್.ಗೋವಿಂದೇಗೌಡ, ಉಪನ್ಯಾಸಕ, ಆರೇನಹಳ್ಳಿ, ಪಿರಿಯಾಪಟ್ಟಣ ತಾ.
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…