ಓದುಗರ ಪತ್ರ

ಓದುಗರ ಪತ್ರ| ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಲಿ

ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ಅವರು ಅಡುಗೆ ಮಾಡಲು ಸೌದೆ ಒಲೆ ಬಳಸುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಉಜ್ವಲಾ ಯೋಜನೆಯ ಮೂಲಕ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುತ್ತಿದೆ.

ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಪಡೆದು, ಗ್ಯಾಸ್‌ ಸಿಲಿಂಡರ್ ವಿತರಿಸುವ ಜವಾಬ್ದಾರಿಯನ್ನು ಗ್ರಾಮೀಣ್‌ ವಿತರಕ್ ಕೇಂದ್ರಗಳಿಗೆ ನೀಡಲಾಗಿದೆ. ಆದರೆ ಕೆಲವು ಗ್ರಾಮೀಣ್ ವಿತರಕ್ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಲ್ಲದೆ ಜನರಿಗೂ ಸ್ಪಂದಿಸುತ್ತಿಲ್ಲ. ರಾವಂದೂರಿನಲ್ಲಿನ ಇಂಥ ಕೇಂದ್ರದಲ್ಲಿಯೂ ಇದೇ ಸಮಸ್ಯೆ ಕಾಡುತ್ತಿದೆ.

ಇಲ್ಲಿ ಈವರೆಗೂ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆಯೇ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮೇಲಧಿಕಾರಿಗಳಿಂದ ವಿತರಣೆ ಮಾಡಲು ಯಾವುದೇ ಆದೇಶ ಬಂದಿಲ್ಲ ಎನ್ನುತ್ತಾರೆ. ಈ ಹಿಂದೆ ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದೆ ಎಂದು ಸಬೂಬು ನೀಡಿ ಜಾರಿಕೊಂಡಿದ್ದರು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಗ್ರಾಮೀಣ್ ವಿತರಕ್ ಕೇಂದ್ರಗಳಿಗೆ ಗ್ಯಾಸ್‌ ಸಿಲಿಂಡರ್‌ ಗಳನ್ನು ವಿತರಣೆ ಮಾಡುವಂತೆ ಸೂಚಿಸಬೇಕಿದೆ.

-ಎ.ಎಸ್.ಗೋವಿಂದೇಗೌಡ, ಉಪನ್ಯಾಸಕ, ಆರೇನಹಳ್ಳಿ, ಪಿರಿಯಾಪಟ್ಟಣ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

3 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

3 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

3 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

4 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

4 hours ago