ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ ಮೇಲೆಯೂ ಜಿಎಸ್‌ಟಿ ವಿಧಿಸಲು ಮುಂದಾಗುತ್ತಿರುವುದು ಜನರನ್ನು ಸಂಕಷ್ಟಕ್ಕೀಡು ಮಾಡಿದೆ.
ಜನಸಾಮಾನ್ಯರಿಗೆ ಜಿಎಸ್‌ಟಿ ಹೊರೆಯಾಗಿ ಪರಿಣಮಿಸಿದೆ ಎನ್ನುವಾಗಲೇ ಕೇಂದ್ರ ಸರ್ಕಾರ ಬೀದಿ ಬದಿ ವ್ಯಾಪಾರಿಗಳಿಗೂ ಜಿಎಸ್‌ಟಿ ವಿಧಿಸಲು ಮುಂದಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ತಮಿಳುನಾಡಿನಲ್ಲಿ ಪಾನಿಪುರಿ ಮಾರುವ ವ್ಯಾಪಾರಿಯೊಬ್ಬರು ಒಂದು ವರ್ಷದ ಅವಽಯಲ್ಲಿ ಯುಪಿಐ ಪೇಮೆಂಟ್ ಮೂಲಕ ೪೦ ಲಕ್ಷ ರೂ. ವ್ಯವಹಾರ ನಡೆಸಿದ್ದು, ಆ ವ್ಯಾಪಾರಿಗೂ ಈಗ ಜಿಎಸ್‌ಟಿ ನೋಟಿಸ್ ನೀಡಲಾಗಿದೆಯಂತೆ. ಆನ್‌ಲೈನ್ ಪೇಮೆಂಟ್ ವ್ಯವಸ್ಥೆ ಪಾನಿಪುರಿ ಮಾರುವವರಿಗೂ ತಮ್ಮ ವ್ಯವಹಾರ ಆಯವ್ಯಯಗಳನ್ನು ತೋರಿಸುವಂತೆ ಮಾಡಿರುವ ಜತೆಗೆ ಯುಪಿಐ ಪೇಮೆಂಟ್ ವ್ಯವಸ್ಥೆಯ ಮೂಲಕ ಕಪ್ಪು ಹಣವನ್ನು ಸುಲಭವಾಗಿ ಹುಡುಕುವುದರಲ್ಲಿ ಎಷ್ಟು ಸಹಾಯಕ ಎಂಬುದು ತಿಳಿದುಬಂದಿದೆ. ಸದ್ಯ ತಮಿಳುನಾಡಿನ ಈ ಪ್ರಕರಣ ಬೀದಿಬದಿ ವ್ಯಾಪಾರಿಗಳನ್ನೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಲು ವಿತ್ತ ಸಚಿವರು ಚಿಂತಿಸುವಂತೆ ಮಾಡಿದೆ. ಮುಂದಿನ ದಿನಗಳಲ್ಲಿ ಬೀದಿಬದಿಯ ವ್ಯಾಪಾರಿಗಳಿಗೂ ಜಿಎಸ್‌ಟಿ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಬಹುದು.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…