Mysore
21
overcast clouds

Social Media

ಭಾನುವಾರ, 10 ನವೆಂಬರ್ 2024
Light
Dark

ಓದುಗರ ಪತ್ರ| ಕಾನೂನಿನ ಮೇಲೆ ಭರವಸೆ ಮೂಡಿದೆ

ಕಬ್ಬಿಣ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಕೃಷ್ಣ ಸೈಲ್‌ಗೆ ೭ ವರ್ಷಗಳ ಕಾಲ ಜೈಲು ಶಿಕ್ಷೆಯಾಗಿದ್ದು, ಈ ತೀರ್ಪನ್ನು ಸ್ವಾಗತಿಸಿ ಮಾತನಾಡಿರುವ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಇದು ನ್ಯಾಯಾಂಗ ವ್ಯವಸ್ಥೆಗೆ ದೊರೆತ ಜಯ, ಇದರಿಂದ ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಹೆಚ್ಚಲಿದೆ, ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದಿ ದ್ದಾರೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳಿಗೂ ಶಿಕ್ಷೆಯಾಗಬೇಕು. ಇಂತಹ ಕಾನೂನು ಕ್ರಮಗಳು ಭ್ರಷ್ಟರಿಗೆ ಎಚ್ಚರಿಕೆಯ ಘಂಟೆ ಎಂಬುದು ಅವರ ಅಭಿಪ್ರಾಯವಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿನ ಹೈ-ಪ್ರೊಫೈಲ್ ಪ್ರಕರಣಗಳಲ್ಲಿ ನ್ಯಾಯಾಲಯ ತೆಗೆದುಕೊಂಡ ನಿಲುವು ಜನರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಪ್ರಕರಣವಿರಬಹುದು, ನಟ ದರ್ಶನ್ ಮೇಲಿರುವ ಕೊಲೆ ಆರೋಪವಿರಬಹುದು, ಶಾಸಕ ಮುನಿರತ್ನ ಮೇಲೆ ಕೇಳಿಬಂದಿರುವ ಅತ್ಯಾಚಾರದ ಪ್ರಕರಣಗಳಲ್ಲಿ ನ್ಯಾಯಾಂಗ ವ್ಯವಸ್ಥೆ ತೆಗೆದುಕೊಂಡ ನಿರ್ಧಾರಗಳು ಜನಸಾಮಾನ್ಯರಲ್ಲಿ ವಿಶ್ವಾಸ ಮೂಡಿಸಿದೆ. ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾದಷ್ಟೂ ಜನ ಸಾಮಾನ್ಯರು ನೆಮ್ಮದಿ ಯಿಂದ ಬದುಕಲು ಸಾಧ್ಯ. ಯಾವುದೇ ಪ್ರಕರಣವಾಗಲಿ, ಆರೋಪಿ ಎಷ್ಟೇ ಪ್ರಭಾವಿಯಾಗಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

Tags: