ಓದುಗರ ಪತ್ರ

ಓದುಗರ ಪತ್ರ | ಕತ್ತಲೆಯಲ್ಲಿ ವಾಕಿಂಗ್ ಮಾಡುವುದು ಹೇಗೆ?

ಮೈಸೂರಿನಲ್ಲಿ ಬಹುತೇಕ ಉದ್ಯಾನವನಗಳು ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಿಗ್ಗೆ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ಮುಂಜಾನೆಯ ವೇಳೆ ವಾಕಿಂಗ್ ಮಾಡುವವರಿಗೆ ತೊಂದರೆಯಾಗುತ್ತಿದೆ.

ಉದ್ಯಾನವನಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ನಿತ್ಯ ೫ ಗಂಟೆಗೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಈ ನಸುಕಿನ ಜಾವದಲ್ಲಿ ಕತ್ತಲಿರುವುದರಿಂದ ವಾಕಿಂಗ್ ಮಾಡುವವರಿಗೆ ಬೆಳಕಿನ ಅವಶ್ಯಕತೆ ಇರುತ್ತದೆ. ಆದರೆ ಪಾರ್ಕ್ ಮತ್ತು ರಸ್ತೆ ಬದಿಯ ವಿದ್ಯುತ್ ದೀಪಗಳನ್ನು ಬೆಳಗಿನ ೬ ಗಂಟೆಗೂ ಮೊದಲೇ ಆರಿಸಲಾಗುತ್ತಿದ್ದು, ನಸುಕಿನ ಮಂದ ಬೆಳಕಿನಲ್ಲಿಯೇ ವಾಕಿಂಗ್ ಮಾಡಬೇಕಾದ ಪರಿಸ್ಥಿತಿ ಇದೆ. ಈಗ ಬೆಳಿಗ್ಗೆ ೬. ೪೫ಕ್ಕೆ ಸೂರ್ಯೋದಯವಾಗುತ್ತಿದ್ದು, ಅಲ್ಲಿಯವರೆಗೂ ಕತ್ತಲು ಆವರಿಸಿರುತ್ತದೆ. ಇತ್ತೀಚೆಗೆ ಮೈಸೂರಿನ ಶ್ರೀರಾಂಪುರದ ಶಿವನ ದೇವಸ್ಥಾನದ ಎದುರಿನ ಪಾರ್ಕ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ಹಿರಿಯ ನಾಗರಿಕರೊಬ್ಬರು ಬೆಳಿಗ್ಗೆ ೬ ಗಂಟೆಗೆ ಕತ್ತಲೆಯಲ್ಲಿ ಮುಗ್ಗರಿಸಿ ಬಿದ್ದು ಅಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂತಹ ಘಟನೆಗಳು ಬಹುತೇಕ ಪಾರ್ಕ್‌ಗಳಲ್ಲಿ ನಡೆಯುತ್ತಿದ್ದು, ಸಂಬಂಧಪಟ್ಟವರು ಮುಂದಿನ ಎರಡು ತಿಂಗಳ ಕಾಲ ಬೆಳಿಗ್ಗೆ ೬. ೩೦ರವರೆಗೂ ವಿದ್ಯುತ್ ದೀಪಗಳು ಬೆಳಗುವಂತೆ ಮಾಡಲಿ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

25 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

34 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

4 hours ago