ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನದಿಗಳು, ಜಲಾಶಯಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿವೆ. ಈ ರಮಣೀಯ ದೃಶ್ಯಗಳನ್ನು ಕಣ್ಣುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಬಹುತೇಕ ಜಲಾಶಯಗಳು, ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಇಂತಹ ಅಪಾಯದ ಸಂದರ್ಭದ ಲ್ಲಿಯೂ ಕೆಲ ಪ್ರವಾಸಿಗರು ಹುಚ್ಚು ಸಾಹಸಗಳನ್ನು ಮಾಡಲು ಹೋಗಿ ಅಪಾಯವನ್ನು ಮೈಮೇಲೆ ಎಳೆದು ಕೊಳ್ಳುತ್ತಿದ್ದಾರೆ. ಪ್ರವಾಸಿ ತಾಣಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿ ಯಾರೂ ನದಿಗಿಳಿಯದಂತೆ ಎಷ್ಟೇ ಎಚ್ಚರವಹಿಸಿದರೂ ಕೆಲವರು ಹುಚ್ಚಾಟಗಳನ್ನು ಮಾಡಲು ಹೋಗಿ ನೀರುಪಾಲಾಗುತ್ತಿದ್ದಾರೆ. ಆದ್ದರಿಂದ ಸರ್ಕಾರ ಮಳೆಗಾಲ ಮುಗಿಯುವವರೆಗೂ ತಾತ್ಕಾಲಿಕವಾಗಿ ನದಿ, ಜಲಾಶಯ ಹಾಗೂ ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.





