ಮೈಸೂರಿನ ಬೋಗಾದಿ-ಗದ್ದಿಗೆ ರಸ್ತೆಯಲ್ಲಿ ಬರುವ ರೂಪಾನಗರದಿಂದ ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಬೀರಿಹುಂಡಿ, ಗದ್ದಿಗೆ ಮಾರ್ಗವಾಗಿ ಹಾದುಹೋಗುವ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಆಗಿಂದಾಗ್ಗೆ ಕಳ್ಳತನಗಳು, ಅಪಘಾತಗಳು ನಡೆಯುತ್ತಿವೆ. ಪಟ್ಟಣ ಪಂಚಾಯಿತಿಯಲ್ಲಿ ಜನ ಪ್ರತಿನಿಧಿಗಳು ಇಲ್ಲದ ಕಾರಣ ಯಾರಿಗೆ ದೂರು ನೀಡಬೇಕು ಎಂದು ಜನಸಾಮಾನ್ಯರಿಗೆ ತಿಳಿಯದಾಗಿದೆ.
ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಂಬಂಧಪಟ್ಟವರು ಆದಷ್ಟು ಬೇಗ ಈ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು



