ಓದುಗರ ಪತ್ರ
ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ.
ಆದರೆ, ಸರ್ಕಾರದ ನಡೆಯನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲೂ ಪ್ರತ್ಯೇಕತೆಯ ಮತ್ತು ವಿಭಜನೆಯ ಕೂಗು ಎದ್ದರೆ ಅದಕ್ಕೆ ಯಾರು ಹೊಣೆ? ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಪ್ರತ್ಯೇಕವಾಗಬೇಕು ಎಂಬ ಕೂಗು ಆಗೊಮ್ಮೆ ಈಗೊಮ್ಮೆ ಕೇಳಿಬರುತ್ತಿದ್ದು, ಇತ್ತೀಚೆಗೆ ಕರಾವಳಿ ಭಾಗದ ಶಾಸಕರೊಬ್ಬರು ಮಂಗಳೂರಿನಲ್ಲಿ ವಿಧಾನಸೌಧ ನಿರ್ಮಿಸುವ ಬಗ್ಗೆ ಮಾತನಾಡಿದ್ದಾರೆ.
ಸರ್ಕಾರ ಯಾವುದೇ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳುವಾಗ ಅದರ ದೂರಗಾಮಿ ಪರಿಣಾಮದ ಬಗೆಗೆ ಯೋಚಿಸಬೇಕು. ಒಡೆದು ಆಳುವುದು ಅಥವಾ ವಿಭಜನೆ ಮಾಡುವುದು ಎಂದಿಗೂ ಮಾರಕ ಎನ್ನುವುದನ್ನು ಆಡಳಿತಾರೂಢ ಸರ್ಕಾರ ಸದಾ ನೆನಪಿನಲ್ಲಿಟ್ಟುಕೊಳ್ಳ ಬೇಕು. ಒಂದು ರೋಗಕ್ಕೆ ನೀಡುವ ಚಿಕಿತ್ಸೆ ಇನ್ನೊಂದು ಮಹಾರೋಗಕ್ಕೆ ಕಾರಣವಾಗಬಾರದು.-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು.
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…
ಬದುಕು ಬದಲಿಸಿದ ಪತಿ ವಿನೋದ್ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು.…