Mysore
22
haze

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಓದುಗರ ಪತ್ರ | ರಾಷ್ಟ್ರಪತಿಗಳಿಗೆ ಅಗೌರವ ತೋರಿಸಿದ್ದು ಸರಿಯಲ್ಲ

ಇತ್ತೀಚೆಗೆ ಪ್ರಾರಂಭಗೊಂಡ ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ’Poor lady’ ಎಂದು ಕರೆದಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭೆಯ ಸದಸ್ಯೆ ಸೋನಿಯಾ ಗಾಂಧಿಯವರನ್ನು ಆಡಳಿತಾರೂಢ ಮೈತ್ರಿಕೂಟದ ಪಕ್ಷಗಳು ಕಟುವಾಗಿ ಟೀಕಿಸಿವೆ. ಅಲ್ಲದೆ ಅವರ ವಿರುದ್ಧ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಕೂಡ ಮಂಡಿಸಲಾಗಿದೆ.

ಸೋನಿಯಾ ಗಾಂಧಿಯವರು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಆದರೂ ದೇಶದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಷ್ಟ್ರಪತಿಗಳ ಬಗ್ಗೆ ಅವರು ಈ ರೀತಿ ಕೇವಲವಾಗಿ ಮಾತನಾಡಿರುವುದು ಸರಿಯಲ್ಲ. ಇದರಿಂದ ರಾಷ್ಟ್ರಪತಿಗಳ ಘನತೆ ಮತ್ತು ಗೌರವಕ್ಕೆ ಧಕ್ಕೆಯುಂಟಾಗಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ನಿರಾಕರಿಸಲು ಸಾಧ್ಯವಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಹಾಗೂ ಒಂದು ರಾಷ್ಟ್ರೀಯ ಪಕ್ಷದ ನಾಯಕರಾಗಿ ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಸೋನಿಯಾ ಗಾಂಧಿಯವರು ಈ ರೀತಿ ಮಾತನಾಡಿದ್ದು ಸರಿಯಲ್ಲ.
-ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

Tags:
error: Content is protected !!