ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75ರಷ್ಟು ಮೀಸಲಾತಿ ನೀಡಬೇಕು ಎಂಬ ವಿಧೇಯಕ ವನ್ನು ಜು.15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದುಕೊಂಡರೂ ಈ ಬಗ್ಗೆ ಗೊಂದಲಗಳು ಹಾಗೂ ಕೆಲ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬಳಿಕ ಈ ವಿಧೇಯಕವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಇಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಉದ್ಯೋಗದಲ್ಲಿಯೂ ಕೂಡ. ಈ ಬೇಡಿಕೆ ಬಹಳ ಹಿಂದಿನಿಂದಲೂ ಕೇಳಿಬಂದಿತ್ತಾದರೂ, ಈಗ ಈ ಸಂಬಂಧ ಕಾಯಿದೆ ಜಾರಿಯಾಗುವ ಲಕ್ಷಣಗಳು ಕಾಣುತ್ತಿವೆ. ಸದ್ಯ ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಈ ಹೊಸ ಕಾಯಿದೆಯು ಕನ್ನಡಿಗರಿಗೆ ಉದ್ಯೋಗಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ. ಕರ್ನಾಟಕದಲ್ಲಿ 10-15 ವರ್ಷಗಳಿಂದ ವಾಸಿಸುತ್ತಿದ್ದರೂ ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಸರಿಯಾಗಿ ಬಾರದವರನ್ನೂ ಕೆಲ ಖಾಸಗಿ ಏಜೆನ್ಸಿಗಳು ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದ ಮಾತ್ರಕ್ಕೆ ಅವರನ್ನು ಸ್ಥಳೀಯರು ಎಂದು ಪರಿಗಣಿಸುವುದು ಸೂಕ್ತವಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಈ ವಿಧೇಯಕವನ್ನು ಕಾಯಿದೆಯಾಗಿ ಜಾರಿಗೆ ತರುವುದು ಸೂಕ್ತ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…