೨೦೨೩ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ೧೩೬ ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದಾಗ ಈ ಅವಧಿಯಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ದಾಗ ಆ ಭಾವನೆ ಸುಳ್ಳಾಗಿದೆಯೇನೋ ಅನಿಸುತ್ತದೆ. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬುದಕ್ಕೆ ರಾಜಕಾರಣಿಗಳು ಆಗಾಗ್ಗೆ ಏರ್ಪಡಿಸುತ್ತಿರುವ ಡಿನ್ನರ್ ಕೂಟಗಳು, ಸಮಾನ ಮನಸ್ಕರ ಸಭೆಗಳು, ಗುಂಪಿನಲ್ಲಿ ವಿದೇಶಿ ಪ್ರವಾಸ, ರಹಸ್ಯ ಮೀಟಿಂಗ್‌ಗಳು ನಡೆ ಯುತ್ತಿರುವುದು ಸಾಕ್ಷಿಯಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಕುದುರೆ ವ್ಯಾಪಾರವೂ ಆರಂಭವಾಗಲಿದ್ದು, ರೆಸಾರ್ಟ್ ರಾಜಕಾರಣ ಗರಿಗೆದರ ಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ. ಈ ರಾಜಕೀಯ ಅಸ್ಥಿರತೆಯ ಕಾರ್ಮೋಡ ರಾಜ್ಯದ ಎರಡೂ ಪ್ರಮುಖ ಪಕ್ಷಗಳಿಗೆ ಅಂಟಿದ್ದು, ಒಂದು ಪಕ್ಷದ ಭಿನ್ನಮತವನ್ನು ಮತ್ತೊಂದು ಪಕ್ಷ ನಗದೀಕರಿಸಿಕೊಳ್ಳುವ ಸ್ಥಿತಿಯಲ್ಲಿರುವುದರಿಂದ ಭಿನ್ನಮತ ತಾರ್ಕಿಕ ಅಂತ್ಯ ಕಾಣಲು ವಿಳಂಬವಾಗಬಹುದು. ಚಲನಚಿತ್ರಗಳ ಕೊನೆಯ ದೃಶ್ಯಾವಳಿಗಳಲ್ಲಿ ಪೊಲೀಸರು ಪ್ರವೇಶಿಸಿದಂತೆ ಈ ಪಕ್ಷಗಳ ವರಿಷ್ಠರು ತಡವಾಗಿ ಪ್ರವೇಶ ಮಾಡುತ್ತಿದ್ದು, ರಾಜ್ಯ ರಾಜಕಾರಣದ ಪರಿಸ್ಥಿತಿ ‘ಕೋಟೆ ಸೂರೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ’ ಆಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯ ವೈಖರಿ ಕನ್ನಡಿಗರನ್ನು ಭ್ರಮನಿರಸನಗೊಳ್ಳುವಂತೆ ಮಾಡಿದ್ದು, ನಮ್ಮ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷವೊಂದು ಅಽಕಾರದಲ್ಲಿ ಇರಬಾರದಿತ್ತೇ ಎಂದು ಚಿಂತಿಸುವಂತೆ ಮಾಡಿದೆ. -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…