ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಆಸಕ್ತಿಯೇ ಇಲ್ಲವಾಗುತ್ತಿದೆ. ಪ್ರಿಂಟ್ ಸಂಸ್ಕೃತಿಯು ಡಿಜಿಟಲ್ ಸಂಸ್ಕೃತಿಯಾಗಿ ಬದಲಾಗುತ್ತಿದೆ ಎಂದು ಚಿಂತಕ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆ ವಿಷಾದ ವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದು, ತಮ್ಮ ಬಿಡುವಿನ ವೇಳೆಯಲ್ಲಿ ಶೈಕ್ಷಣಿಕ ವಿಚಾರಗಳ ಕುರಿತು ಗಮನಹರಿಸುವ ಬದಲು ಮೊಬೈಲ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಹೀಗೆ ಮಕ್ಕಳು ಮೊಬೈಲ್‌ಗೆ ಜೋತು ಬಿದ್ದಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಪೋಷಕರು ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಪ್ರಯತ್ನಿಸುತ್ತಿಲ್ಲ. ಮುಂದಾದರೂ ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಅವರನ್ನು ಮೊಬೈಲ್ ಗೀಳಿನಿಂದ ದೂರ ಮಾಡಿ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಬೇಕಿದೆ. -ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.





