ಓದುಗರ ಪತ್ರ

ಓದುಗರ ಪತ್ರ | ಪುಸ್ತಕಗಳು ಪಳೆಯುಳಿಕೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪುಸ್ತಕಗಳನ್ನು ಓದುವ ಆಸಕ್ತಿಯೇ ಇಲ್ಲವಾಗುತ್ತಿದೆ. ಪ್ರಿಂಟ್ ಸಂಸ್ಕೃತಿಯು ಡಿಜಿಟಲ್ ಸಂಸ್ಕೃತಿಯಾಗಿ ಬದಲಾಗುತ್ತಿದೆ ಎಂದು ಚಿಂತಕ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆ ವಿಷಾದ ವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದು, ತಮ್ಮ ಬಿಡುವಿನ ವೇಳೆಯಲ್ಲಿ ಶೈಕ್ಷಣಿಕ ವಿಚಾರಗಳ ಕುರಿತು ಗಮನಹರಿಸುವ ಬದಲು ಮೊಬೈಲ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಹೀಗೆ ಮಕ್ಕಳು ಮೊಬೈಲ್‌ಗೆ ಜೋತು ಬಿದ್ದಿರುವುದು ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಪೋಷಕರು ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಪ್ರಯತ್ನಿಸುತ್ತಿಲ್ಲ. ಮುಂದಾದರೂ ಪೋಷಕರು ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಅವರನ್ನು ಮೊಬೈಲ್ ಗೀಳಿನಿಂದ ದೂರ ಮಾಡಿ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಬೇಕಿದೆ. -ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago