ಓದುಗರ ಪತ್ರ

ಓದುಗರ ಪತ್ರ | ಮದ್ಯದ ಬಾಟಲಿಗಳು ಪುನರ್ಬಳಕೆಯಾಗಲಿ

ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ದಿನ ಈ ಬಾರಿ ದಾಖಲೆಯ ೩೦೫ ಕೋಟಿ ರೂ. ಮದ್ಯ ಮಾರಾಟವಾಗಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನಲಾಗುತ್ತಿದೆ. ಡಿಸೆಂಬರ್ ೩೧ರ ರಾತ್ರಿ ಮದ್ಯದ ಕೂಟಗಳು ಎಷ್ಟರಮಟ್ಟಿಗೆ ಜರುಗಿದವು ಎಂದರೆ ಜನವರಿ ೧ರಂದು ಯಾವುದೇ ಪಾರ್ಕ್, ಕೆರೆ, ಹಿನ್ನೀರಿನ ಪ್ರದೇಶಗಳನ್ನು ನೋಡಿದರೂ ಮದ್ಯದ ಬಾಟಲಿಗಳೇ ತುಂಬಿ ಹೋಗಿದ್ದವು. ಇನ್ನು ಕೆಲ ರಸ್ತೆ ಬದಿಗಳಲ್ಲಂತೂ ಇಂದಿಗೂ ಕುಡಿದು ಬಿಸಾಡಿದ ಗಾಜಿನ ಬಾಟಲಿಗಳು ಹರಡಿಕೊಂಡಿವೆ. ಇತ್ತೀಚಿನ ದಿನಗಳಲ್ಲಿ ಗಾಜಿನ ಬಾಟಲಿಗಳನ್ನು ಪುನರ್ಬಳಕೆಗೆ ಯಾರೂ ತೆಗೆದುಕೊಳ್ಳದ ಕಾರಣ, ಚಿಂದಿ ಸಂಗ್ರಹಿಸುವವರೂ ಈ ಬಾಟಲಿಗಳನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಗಾಜಿನ ಬಾಟಲಿಗಳು ರಸ್ತೆ ಬದಿಯಲ್ಲಿ, ಪಾರ್ಕ್‌ಗಳಲ್ಲೇ ಬಿದ್ದಿವೆ. ಇದರಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಮದ್ಯ ಮಾರಾಟದಿಂದ ಅಽಕ ಆದಾಯ ಪಡೆಯುತ್ತಿರುವ ರಾಜ್ಯ ಸರ್ಕಾರ ಮದ್ಯದ ಬಾಟಲಿಗಳ ಪುನರ್ಬಳಕೆಯ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಮದ್ಯದ ಬಾಟಲಿಗಳ ವಿಲೆವಾರಿಯೇ ರಾಜ್ಯ ಸರ್ಕಾರಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…

1 hour ago

ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್

ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…

2 hours ago

ಬೆಳಗಾವಿ ಅಧಿವೇಶನದಲ್ಲೂ ನಟ ದರ್ಶನ್‌ ಬಗ್ಗೆ ಚರ್ಚೆ : ಏನದು?

ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…

2 hours ago

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

2 hours ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

2 hours ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

2 hours ago