ಓದುಗರ ಪತ್ರ

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು ಭಾರತದ ಮೊದಲ ಡಿಜಿಟಲ್ ಜನಗಣತಿಯಾಗಿರುವುದು ವಿಶೇಷವಾಗಿದೆ. ಗಣತಿದಾರರು ತಮ್ಮ ಸ್ವಂತ ಮೊಬೈಲ್ ಫೋನ್ ಬಳಸಿ ಮೊಬೈಲ್ ಆಪ್‌ನಿಂದ ಕುಟುಂಬಗಳಿಂದ ಡಿಜಿಟಲ್ ರೂಪದಲ್ಲಿ ಮಾಹಿತಿಗಳನ್ನು ಸಂಗ್ರಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಏ. ೧ ರಿಂದ ಏ. ೧೫ ರವರೆಗೆ ಸ್ವಯಂಗಣತಿಗೆ ಅವಕಾಶ ಕಲ್ಪಿಸಲಾಗಿದ್ದು, ೧೫ ರಿಂದ ೨೦ ನಿಮಿಷಗಳಲ್ಲಿ ತಮ್ಮ ಮನೆಯ ಸ್ವಂತ ಗಣತಿಯನ್ನು ಮಾಡಿಕೊಂಡು ಸ್ವಯಂ ಗಣತಿಯ ಗುರುತಿನ ಸಂಖ್ಯೆ ಪಡೆದುಕೊಂಡು ಏ. ೧೬ರಿಂದ ಮೇ ೧೫ರವರೆಗೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ ವಿಶೇಷ ಸಂಖ್ಯೆ ನೀಡಿ ಗಣಿತಿದಾರರ ಗಣತಿ ಕಾರ್ಯವನ್ನು ಸರಳಗೊಳಿಸಿ ಯಶಸ್ವಿಗೊಳಿಸಲು ಎಲ್ಲರೂ ನೆರವಾಗಬೇಕಿದೆ.

ಜನಗಣತಿಯಲ್ಲಿ ಸಂಗ್ರಹಿಸುವ ಮಾಹಿತಿ, ಹೆಸರು, ಗುರುತನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಯಾವುದೇ ತೆರಿಗೆ ಅಥವಾ ಪರಿಶೋಧನೆ ಉದ್ದೇಶಕ್ಕೆ ದತ್ತಾಂಶವನ್ನು ಬಳಸಿಕೊಳ್ಳುವುದಿಲ್ಲ . ಇದು ಸುರಕ್ಷಿತವಾಗಿರುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಗಣತಿದಾರರು ತಮ್ಮ ಮನೆಗೆ ಬಂದಾಗ ಮಾಹಿತಿದಾರರು ಸಂಶಯ ಪಡದೇ ಗಣತಿದಾರರು ಕೇಳುವ ೩೪ ಸರಳ ಪ್ರಶ್ನೆಗಳಿಗೆ ಪಾರದರ್ಶಕತೆ ಹಾಗೂ ವಾಸ್ತವಾಂಶದೊಂದಿಗೆ ಮಾಹಿತಿ ನೀಡಬೇಕಿದೆ. ಗಣತಿದಾರರು ಕೂಡ ಬೇರೆ ಯಾವುದೇ ಪ್ರಶ್ನೆಗಳನ್ನು ಕೇಳಿ, ಕಿರಿಕಿರಿಗೊಳಿಸದೆ ಸರಿಯಾದ ಮಾಹಿತಿಯನ್ನು ದಾಖಲಿಸಿಕೊಂಡು ಈ ಬಾರಿಯ ಜನಗಣತಿಯನ್ನು ಯಶಸ್ವಿಗೊಳಿಸುವುದು ಅಗತ್ಯವಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…

8 mins ago

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

2 hours ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

2 hours ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

2 hours ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

2 hours ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

4 hours ago