ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಪಾಸ್ ಗಳಿಗಾಗಿ ಪರದಾಡುವಂತಾಗಿದೆ.
ಕಳೆದ ಕೆಲ ವರ್ಷಗಳಿಂದ ಈ ರಾಜಕಾರಣಿಗಳ ಹಾವಳಿ ವಿಪರೀತವಾಗಿದೆ. ಅರಮನೆ ಅಂಗಳದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಂಬೂ ಸವಾರಿಯ ವೀಕ್ಷಣೆಗೆ ಪಾಸ್‌ಗಳನ್ನು ಖರೀದಿಸಲು ಸಾರ್ವಜನಿಕರು ಹರಸಾಹಸ ಪಡಬೇಕಾಗಿದೆ. ಚುನಾಯಿತ ಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಒಬ್ಬೊಬ್ಬರೂ 500ರಿಂದ 1000 ಪಾಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು ಪಾಸ್ ಕೇಳಿದರೆ ಅಧಿಕಾರಿಗಳಿಂದ ಇಲ್ಲ ಎಂಬ ಉತ್ತರ ಬರುತ್ತಿದೆ. ಇನ್ನು ದಸರಾ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳ ಜತೆ ಅವರ ಬೆಂಬಲಿಗರೂ ಗುಂಪು ಗುಂಪಾಗಿ ಆಗಮಿಸುತ್ತಿದ್ದು, ವೇದಿಕೆಯನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರು ನೆಮದಿಯಿಂದ ಕುಳಿತು ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಈ ಬಾರಿಯಾದರೂ ದಸರಾದಲ್ಲಿ ಇಂತಹ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರ ವಹಿಸಬೇಕಿದೆ.
-ಜಾಕೀರ್ ಖಾನ್, ಮೈಸೂರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…