ಓದುಗರ ಪತ್ರ

ಓದುಗರ ಪತ್ರ |ಮೀನು ಮಾರಾಟ ಕೇಂದ್ರ ಸ್ಥಳಾಂತರಗೊಳ್ಳಲಿ

ಮೈಸೂರಿನ ಕೆಆರ್.ಎಸ್ ರಸ್ತೆಯಲ್ಲಿರುವ ಆಕಾಶವಾಣಿ ಕೇಂದ್ರದ ಮುಖ್ಯ ದ್ವಾರದ ಮುಂಭಾಗ ಹಾಗೂ ಚಲುವಾಂಬ ಪಾರ್ಕ್‌ಗೆ ಹೊಂದಿಕೊಂಡಂತೆ ಇರುವ ಮೀನು ಮಾರಾಟ ಕೇಂದ್ರದಿಂದಾಗಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.

ಈ ಮೀನು ಮಾರಾಟ ಕೇಂದ್ರದ ಹಿಂಭಾ ಗವೇ ಚಲುವಾಂಬ ಪಾರ್ಕ್ ಇದೆ. ಅಲ್ಲದೆ ಆಕಾಶವಾಣಿ ಕೇಂದ್ರದ ವಾತಾವರಣವೂ ಸುಂದರವಾಗಿದೆ. ಹೀಗಾಗಿಯೇ ಸಂಜೆಯಾಗುತ್ತಲೇ ಇಲ್ಲಿ ಹಿರಿಯ ನಾಗರಿಕರು, ಮಹಿಳೆಯರು ವಾಕಿಂಗ್ ಮಾಡುತ್ತಾರೆ. ಆದರೆ, ಈ ಮೀನು ಕೇಂದ್ರದ ತ್ಯಾಜ್ಯವನ್ನು ಬೀದಿನಾಯಿಗಳು ಪಾರ್ಕ್‌ ಹಾಗೂ ಆಕಾಶವಾಣಿ ಸಮೀಪ ಬೀಸಾಡುತ್ತಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣ ವಾಗಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇಲ್ಲಿ ಮೈಸೂರು ಮಹಾನಗರ ಪಾಲಿಕೆಯವರು ಪಾದಚಾರಿ ಮಾರ್ಗದಮೇಲೆಯೇ ಮೀನು ಮಾರಾಟ ಕೇಂದ್ರಕ್ಕೆ ಅನುಮತಿ ನೀಡಿರುವುದು ಸರಿಯಲ್ಲ, ಕುವೆಂಪುನಗರದ ಕಾಂಪ್ಲೆಕ್ಸ್ ಬಳಿಯು ಇದೇ ಸಮಸ್ಯೆ ಎದುರಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ಈ ಬಗ್ಗೆ ಗಮನಹರಿಸಿ ಪಾರ್ಕ್‌ಗಳ ಸಮೀಪವಿರುವ ಮೀನು ಮಾರಾಟ ಕೇಂದ್ರಗಳನ್ನು ಸ್ಥಳಾಂತರಿಸಬೇಕು.

-ಬೂತನಕೆರೆ ವಿಜೇಂದ್ರ, ಮೈಸೂರು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago