ಎಚ್. ಡಿ. ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಅಡುಗೆ ಸಿಬ್ಬಂದಿ ಸೇರಿ ೩-೪ ಗೋಧಿ ಮೂಟೆಗಳನ್ನು ಸುಟ್ಟು ಹಾಕಿರುವುದಾಗಿ ‘ಆಂದೋಲನ’ ದಿನ ಪತ್ರಿಕೆಯಲ್ಲಿ ವರದಿಯಾಗಿದೆ.
ಇದು ನಿಜಕ್ಕೂ ಹೇಯ ಕೃತ್ಯ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಹಸಿದು ಪಾಠ ಕೇಳಬಾರದು ಎಂದು ಸರ್ಕಾರ ಬಿಸಿಯೂಟ ಯೋಜನೆಯಡಿ ಮಧ್ಯಾಹ್ನದ ವೇಳೆ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದೆ. ಇದಕ್ಕಾಗಿ ಕೋಟ್ಯಂತರ ರೂ. ವ್ಯಯಿಸಿ ಎಲ್ಲ ಶಾಲೆಗಳಿಗೂ ಅಗತ್ಯವಿರುವ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದೆ. ಆದರೆ ಅಂತರಸಂತೆ ಶಾಲೆಯಲ್ಲಿ ಪೂರೈಕೆಯಾಗಿದ್ದ ಗೋಧಿಯನ್ನು ಅಡುಗೆ ಸಿಬ್ಬಂದಿ ಹಾಗೂ ಮುಖ್ಯೋಪಾ ಧ್ಯಾಯರು ಬಳಸದೆ ಗೋಽಯಲ್ಲಿ ಹುಳು ಬಂದಿದೆ. ಮೂಟೆಗಳನ್ನು ಶಾಲಾ ಆವರಣದಲ್ಲಿಯೇ ಸುಟ್ಟು ಹಾಕಿದ್ದಾರೆ. ಬಡ ಮಕ್ಕಳ ಹೊಟ್ಟೆ ತುಂಬಿಸಬೇಕಾದ ಆಹಾರ ಪದಾರ್ಥವನ್ನು ಸುಟ್ಟು ಹಾಕಿರುವುದು ಎಷ್ಟು ಸರಿ.
ಈ ಘಟನೆ ನಡೆದು ೧೦ ದಿನಗಳ ಮೇಲಾಗಿದ್ದು, ಈ ವಿಚಾರದ ಬಗ್ಗೆ ಗೊತ್ತಿದ್ದರೂ ಸಿಆರ್‌ಪಿಯಾಗಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಲಿ ಯಾವುದೇ ಕ್ರಮತೆಗೆದುಕೊಳ್ಳದಿರುವುದು ಅನುಮಾನಗಳಿಗೆ ಕಾರಣ ವಾಗಿದೆ. ಆದ್ದರಿಂದ ಕೂಡಲೇ ಮೇಲಧಿಕಾರಿಗಳು ಈ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ.
-ವಿನೋದ್ ಕುಮಾರ್, ಎಚ್. ಡಿ. ಕೋಟೆ ತಾ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…