ಓದುಗರ ಪತ್ರ
ಇತ್ತೀಚಿನ ವರ್ಷಗಳಲ್ಲಿ ದೀಪಾವಳಿ ಎಂದರೆ ಬೆಳಕಿನ ಹಬ್ಬ ಎನ್ನುವು ದಕ್ಕಿಂತ ಪಟಾಕಿಗಳ ಹಬ್ಬ ಎಂಬಂತಾಗಿದೆ. ಪಟಾಕಿಗಳಿಲ್ಲದ ದೀಪಾವಳಿ ಯನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ನಮ್ಮನ್ನು ಕತ್ತಲಿನಿಂದ ಬೆಳಕಿನೆಡೆಗೆ ಮುನ್ನಡೆಸಬೇಕು.
ಈ ಹಬ್ಬದಲ್ಲಿ ನಾವು ದೀಪ ಹಚ್ಚಿ ಸಂಭ್ರಮಿಸಬೇಕೇ ವಿನಾ ಪಟಾಕಿ ಸಿಡಿಸುವ ಮೂಲಕ ಪರಿಸರ ಮಾಲಿನ್ಯ ಮಾಡಬಾರದು. ಪಟಾಕಿ ಸಿಡಿಸುವುದರಿಂದ ಹೊಗೆಯ ಜತೆಗೆ ಅದರಲ್ಲಿನ ರಾಸಾಯನಿಕಗಳೂ ಗಾಳಿಗೆ ಸೇರುತ್ತವೆ. ಇದರಿಂದ ವಾಯು ಮಾಲಿನ್ಯವಾಗುವ ಜತೆಗೆ ಪಟಾಕಿಯಿಂದ ಉಂಟಾಗುವ ಶಬ್ದದಿಂದಾಗಿ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಈ ರಾಸಾಯನಿಕಗಳು ನಮ್ಮ ದೇಹಕ್ಕೆ ಸೇರುವುದರಿಂದ ನಮ್ಮ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ.
ಕರ್ಕಶ ಶಬ್ದದಿಂದಾಗಿ ಶಿಶುಗಳು ಹಾಗೂ ಹಿರಿಯ ನಾಗರಿಕರಿಗೆ ಶ್ರವಣ ದೋಷ ಉಂಟಾಗಬಹುದು. ಇವುಗಳೊಂದಿಗೆ ಕೆಲ ಬಾರಿ ಅಗ್ನಿ ಅನಾಹುತಗಳು ಸಂಭವಿಸುವ ಅಪಾಯವೂ ಇರುತ್ತದೆ. ಆದ್ದರಿಂದ ಈ ಬಾರಿಯ ಪಟಾಕಿಗಳಿಂದ ದೂರವಿದ್ದು, ದೀಪವನ್ನು ಹಚ್ಚಿ ಸಂಭ್ರಮದಿಂದ ದೀಪಾವಳಿ ಆಚರಿಸೋಣ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…