೨೦೧೨ರಲ್ಲಿ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ವನ್ನು ಮತ್ತೆ ಮುನ್ನೆಲೆಗೆ ತಂದಿರುವ ಯುಟ್ಯೂಬರ್ ಸಮೀರ್ ಅವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಆತನ ವಿರುದ್ಧ ಈಗ ಎಫ್‌ಐಆರ್ ದಾಖಲಿಸಿರುವುದು ನಿಜಕ್ಕೂ ಖಂಡನೀಯ.
ಕೆಲವರು ಸೌಜನ್ಯಳ ಹೆಸರು ಬಳಸಿಕೊಂಡು ರಾಜ ಕೀಯ ಮಾಡುವುದು, ಧರ್ಮ- ಧರ್ಮಗಳ ನಡುವೆ ಸಂಘರ್ಷ ತಂದಿಡುವ ಪ್ರಯತ್ನ ಮಾಡುತ್ತಿರುವುದು ಬೇಸರದ ಸಂಗತಿ.
೧೩-೧೪ ವರ್ಷಗಳು ಕಳೆದರೂ ನ್ಯಾಯ ಸಿಗದ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಆಕೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಯು ಟ್ಯೂಬರ್ ಸಮೀರ್ ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದಾರೆ. ಆ ವಿಡಿಯೋ ಮೂಲಕ ಸೌಜ್ಯನ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಇಂತಹ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ. ಇದನ್ನು ಕನ್ನಡಿಗರು ಒಟ್ಟಾಗಿ ಖಂಡಿಸ ಬೇಕು. ಹಲವು ವರ್ಷಗಳಿಂದಲೂ ಈ ಪ್ರಕರಣದ ಕುರಿತು ನಿರಂತರವಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರಿಗೆ ಬೆಂಬಲವಾಗಿ ನಿಂತು ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರೆಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಗಳು ಏಕೆ ಪ್ರಯತ್ನಿಸಲಿಲ್ಲ? ನ್ಯಾಯ ಕ್ಕಾಗಿ ಹೋರಾಡುವವರ ವಿರುದ್ಧವೇ ಪ್ರಕರಣ ದಾಖಲಾದರೆ, ಸಾಮಾನ್ಯ ಜನರಿಗೆ ನ್ಯಾಯ ದೊರಕುವುದಾದರೂ ಹೇಗೆ? ಆದ್ದರಿಂದ ಕನ್ನಡಿಗರೆಲ್ಲರೂ ಸಮೀರ್ ಪರ ಧ್ವನಿಗೂಡಿಸಬೇಕಿದೆ. -ಮನೋಜ್ ಸಾಮ್ರಾಟ್, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…