Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಓದುಗರ ಪತ್ರ| ಶಾಲೆಯ ಸುತ್ತ ಸ್ವಚ್ಛತೆ ಕಾಪಾಡಿ

ಎಚ್.ಡಿ.ಕೋಟೆ ತಾಲ್ಲೂಕಿನ ‘ಎ’ ನೂರಲಕುಪ್ಪೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ.

ಈ ಶಾಲೆಯಲ್ಲಿ 1ರಿಂದ 4ನೇ ತರಗತಿಯವರೆಗೆ ತರಗತಿಗಳು ನಡೆಯುತ್ತಿದ್ದು, 30-35 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಈ ಶಾಲೆಯ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲೆಂದರಲ್ಲಿ ಕಸ ಹರಡಿಕೊಂಡಿದೆ.
ಈಗ ಎಲ್ಲೆಡೆ ಡೆಂಗ್ಯು ಜ್ವರದ ಭೀತಿ ಎದುರಾಗಿದ್ದು, ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಮಕ್ಕಳು ಭಯಪಡುವಂತಾಗಿದೆ.
ಇನ್ನು ಗ್ರಾಮದಲ್ಲಿ ಅನೇಕ ಚರಂಡಿಗಳು ಕಟ್ಟಿಕೊಂಡಿದ್ದು, ಮನೆಗಳ ಮುಂದೆ ಕೊಳಚೆ ನೀರು ನಿಂತಿದೆ. ಇದರಿಂದಾಗಿಯೂ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ನೂರಲಕುಪ್ಪೆ ಗ್ರಾಮ ಪಂಚಾಯಿತಿಯವರು ಈ ಬಗ್ಗೆ ಗಮನಹರಿಸಿ ಶಾಲೆಯ ಸುತ್ತ ಸ್ವಚ್ಛತೆ ಕಾಪಾಡುವ ಜತೆಗೆ ಚರಂಡಿಗಳನ್ನೂ ಸ್ವಚ್ಛಗೊಳಿಸಬೇಕಿದೆ.

-ದೀಪಕ್, ‘ಎ’ ನೂರಲಕುಪ್ಪೆ, ಎಚ್.ಡಿ.ಕೋಟೆ ತಾ.

Tags:
error: Content is protected !!