ತಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಲಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಯೇ ಹರಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ.
ಈ ಗ್ರಾಮಗಳ ರಸ್ತೆ, ಚರಂಡಿ, ಕೆರೆ, ಕಾಲುವೆಗಳಲ್ಲಿ ಕಸದ ರಾಶಿಯೇ ಹರಡಿದ್ದರೂ ಗ್ರಾಮ ಪಂಚಾಯಿ ಯವರು ಸ್ವಚ್ಛಗೊಳಿಸುವ ಗೋಜಿಗೆ ಹೋಗಿಲ್ಲ. ಇದರಿಂದಾಗಿ ಇಲ್ಲಿ ಚರಂಡಿಗೆ ಪ್ಲಾಸ್ಟಿಕ್ ಕವರ್‌ಗಳು, ಚೀಲ, ಬಾಟಲಿಗಳು ಕಟ್ಟಿಕೊಳ್ಳುತ್ತಿದ್ದು, ನೀರು ನಿಂತು ದುರ್ವಾಸನೆ ಬೀರಲಾರಂಭಿಸಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಇನ್ನು ಎಲ್ಲ ರಸ್ತೆಗಳ ಎರಡೂ ಅಂಚುಗಳಲ್ಲಿ ಗಿಡಗಂಟಿ ಬೆಳೆದುಕೊಂಡಿದ್ದು, ವಾಹನ ಸವಾರರಿಗೆ ಎದುರುಗಡೆಯಿಂದ ಬರುವ ವಾಹನಗಳು ಕಾಣದ ಅಪಘಾತಗಳಾಗುವ ಅಪಾಯವಿದೆ. ಈ ಸಂಬಂಧ ಸಾಕಷ್ಟು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿ ಗ್ರಾಮಗಳ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕಿದೆ. -ಎನ್. ವಿನೋದ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…