ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಸ್ವಾತಂತ್ರ್ಯಾನಂತರ ಭಾಷಾವಾರು ಪ್ರಾಂತ್ಯ ರಚನೆಗೊಂಡವು. ಕರ್ನಾಟಕದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಮುಖ್ಯಮಂತ್ರಿಗಳು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ. ಸಂಬಂಧಪಟ್ಟ ಅಧಿಕಾರಿಗಳು ಮುಖ್ಯಮಂತ್ರಿಗಳ ಆದೇಶವನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
– ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು





