ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ.
ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ ದಾಯಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸ ಲಾಗಿದೆ.
ಕಳೆದ ಬಾರಿಯ ದಸರಾದಲ್ಲಿ ಕೆಲ ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರುಗಳಿಂದಲೇ ಕಮಿಷನ್ ಪಡೆದ ಆರೋಪ ಕೇಳಿಬಂದಿತ್ತು. ದಸರಾ ಮುಗಿದು 2 ತಿಂಗಳು ಕಳೆದರೂ ಖರ್ಚುವೆಚ್ಚದ ವರದಿಯನ್ನೇ ನೀಡದ ಪರಿಣಾಮ ದಸರಾ ಮಹೋತ್ಸವ ದಲ್ಲಿ ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ ಈ ಬಾರಿ ಹಾಗಾಗುವುದು ಬೇಡ. ದಸರಾ ಉಸ್ತುವಾರಿ ವಹಿಸುವವರು ಪ್ರಾಮಾಣಿಕವಾಗಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಪ್ರತಿಬಾರಿಯೂ ದಸರಾ ಎಂಬುದು ಜನಪ್ರತಿನಿಧಿಗಳು, ಅವರ ಬೆಂಬಲಿಗರು, ಅಧಿಕಾರಿಗಳ ದಸರಾವಾಗುತ್ತಿದ್ದು, ಈ ಬಾರಿಯಾದರೂ ಜನಸಾಮಾನ್ಯರ ದಸರಾವಾಗುವಂತೆ ನೋಡಿಕೊಳ್ಳಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…