Mysore
24
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

ಓದುಗರ ಪತ್ರ : ಜವರೇಗೌಡ ಪಾರ್ಕ್ ಅಭಿವೃದ್ದಿಯಾಗಲಿ

ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು.

ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕಸ-ಕಡ್ಡಿಗಳಿಂದ ತುಂಬಿಹೋಗಿದೆ. ಅಲ್ಲದೆ ಕುಳಿತುಕೊಳ್ಳಲು ಅಳವಡಿಸಿದ್ದ ಆಸನಗಳೂ ಮುರಿದು ಬಿದ್ದಿವೆ.

ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂಬುದು ಒಂದೆಡೆಯಾದರೆ ಕಳೆದ ೨ ವರ್ಷಗಳಿಂದಲೂ ಇಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಇದ ರಿಂದಾಗಿ ಪಾರ್ಕ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಅಲಭ್ಯ ವಾಗಿದ್ದು, ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪಾಕ್ ನಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಸಂಬಂಧಪಟ್ಟವರು ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಇದರಿಂದಾಗಿ ಪಾರ್ಕ್ ಸಾರ್ವಜನಿಕ ಉಪಯೋಗದಿಂದ ದೂರಾಗಿದ್ದು, ಮೈಸೂರು ಮಹಾನಗರ ಪಾಲಿಕೆಯ ವರು ಕೂಡಲೇ ಈ ಪಾರ್ಕ್‌ಅನ್ನು ಅಭಿವೃದ್ಧಿಪಡಿಸುವ ಜತೆಗೆ, ಶೌಚಾಲಯ ವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಒದಗಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

Tags: