ಮೈಸೂರಿನ ಸರಸ್ವತಿಪುರಂನಲ್ಲಿರುವ ಕೆ. ಜವರೇಗೌಡ ಪಾರ್ಕ್ ಐದು ವರ್ಷಗಳ ಹಿಂದೆ ಮೈಸೂರಿನಲ್ಲಿಯೇ ಅತ್ಯಂತ ಸುಂದರ ಪಾರ್ಕ್ ಗಳಲ್ಲಿ ಒಂದಾಗಿತ್ತು. ನಿತ್ಯ ನೂರಾರು ಮಂದಿ ಪಾರ್ಕ್‌ಗೆ ಭೇಟಿ ನೀಡುತ್ತಿದ್ದರು.
ಆದರೆ, ಇತ್ತೀಚಿನ ದಿನಗಳಲ್ಲಿ ಪಾರ್ಕ್‌ಅನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಸಂಪೂರ್ಣ ಹದಗೆಟ್ಟು ಹೋಗಿದ್ದು, ಕಸ-ಕಡ್ಡಿಗಳಿಂದ ತುಂಬಿಹೋಗಿದೆ. ಅಲ್ಲದೆ ಕುಳಿತುಕೊಳ್ಳಲು ಅಳವಡಿಸಿದ್ದ ಆಸನಗಳೂ ಮುರಿದು ಬಿದ್ದಿವೆ.
ಪಾರ್ಕ್ ಅಭಿವೃದ್ಧಿಯಾಗಿಲ್ಲ ಎಂಬುದು ಒಂದೆಡೆಯಾದರೆ ಕಳೆದ ೨ ವರ್ಷಗಳಿಂದಲೂ ಇಲ್ಲಿನ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಜಡಿಯಲಾಗಿದೆ. ಇದ ರಿಂದಾಗಿ ಪಾರ್ಕ್‌ಗೆ ಬರುವ ಸಾರ್ವಜನಿಕರಿಗೆ ಶೌಚಾಲಯ ಅಲಭ್ಯ ವಾಗಿದ್ದು, ಬಯಲಿನಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಪಾಕ್ ನಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಸಂಬಂಧಪಟ್ಟವರು ಪಾರ್ಕ್ ಅನ್ನು ಅಭಿವೃದ್ಧಿಪಡಿಸಲು ಮುಂದಾಗಿಲ್ಲ. ಇದರಿಂದಾಗಿ ಪಾರ್ಕ್ ಸಾರ್ವಜನಿಕ ಉಪಯೋಗದಿಂದ ದೂರಾಗಿದ್ದು, ಮೈಸೂರು ಮಹಾನಗರ ಪಾಲಿಕೆಯ ವರು ಕೂಡಲೇ ಈ ಪಾರ್ಕ್‌ಅನ್ನು ಅಭಿವೃದ್ಧಿಪಡಿಸುವ ಜತೆಗೆ, ಶೌಚಾಲಯ ವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಒದಗಿಸಬೇಕಿದೆ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…