ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ ಘಟನೆ ರಾಜ್ಯ ವಿಧಾನ ಸಭೆಯಲ್ಲಿ ಮಾ.16ರಂದು ನಡೆದಿದೆ. ಮುಖ್ಯಮಂತ್ರಿ ಹಾಗೂ ಇತರ ಹಿರಿಯ ಸಚಿವರು ಮನವೊಲಿಸಿದ ನಂತರ ಅವರು ತಮ್ಮ ಪೀಠಕ್ಕೆ ಪುನಃ ಮರಳಿದ್ದಾರೆ.
ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ ಕೇವಲ 84 ಪ್ರಶ್ನೆಗಳಿಗೆ ಮಾತ್ರ ಸಂಬಂಧಪಟ್ಟ ಸಚಿವರು ಉತ್ತರ ನೀಡಿದ್ದರು. ಇದರ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದ್ದವು. ವಿಧಾನ ಮಂಡಲದ ಕಲಾಪಗಳಲ್ಲಿ ಪ್ರಶೋತ್ತರ ಸಮಯ ಪ್ರಮುಖವಾಗಿದೆ. ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಕುಂದು ಕೊರತೆಗಳು ಕುರಿತಂತೆ, ಸಂಬಂಧಪಟ್ಟ ಸಚಿವರಿಂದ ಉತ್ತರ ಬಯಸುವುದು ಸಾಮಾನ್ಯ ಪ್ರಜಾಸತ್ತಾತಕ ಪ್ರಕ್ರಿಯೆಯಾಗಿದೆ. ಆದರೆ ಅನೇಕ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೇ ಉತ್ತರಗಳನ್ನು ಸಕಾಲದಲ್ಲಿ ನೀಡುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಸಂಬಂಧಪಟ್ಟ ಸಚಿವರೇ ಸದನದಲ್ಲಿ ಹಾಜರಿರುವುದಿಲ್ಲ. ಇದರಿಂದ ಪ್ರಶ್ನೆಗಳನ್ನು ಕೇಳುವ ಸದಸ್ಯರ ಉತ್ಸಾಹಕ್ಕೆ ತಣ್ಣೀರೆರಚಿದಂತಾಗುತ್ತದೆ. ಜೊತೆಗೆ ಸರ್ಕಾರಕ್ಕೂ ಮುಜುಗರ ಉಂಟಾಗುತ್ತದೆ.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಅತಿ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಬಾಕಿ ಉಳಿಸಿಕೊಂಡಿರುವ ಇಲಾಖೆಯ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹವಾಗಿದೆ. ಇನ್ನು ಮುಂದಾದರೂ ಸ್ಪೀಕರ್‌ರವರು ಸಭಾ ತ್ಯಾಗ ಮಾಡುವಂತಹ ಪರಿಸ್ಥಿತಿ ಬಾರದಿರಲಿ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…