ಶಸ್ತ್ರಚಿಕಿತ್ಸೆಗೆಂದು ಅಮೆರಿಕದ ಫ್ಲೋರಿಡಾ ಆಸ್ಪತ್ರೆಗೆ ತೆರಳಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್‌ಕುಮಾರ್‌ರವರು ಶಸಚಿಕಿತ್ಸೆಯ ನಂತರ ಆರೋಗ್ಯವಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
ಶಿವರಾಜ್ ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅಭಿಮಾನಿಗಳಿಗೆ ಆತಂಕ ಎದುರಾಗಿತ್ತು. ಇಂತಹ ಸಂದರ್ಭದಲ್ಲಿ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರು ಸುದ್ದಿಯನ್ನು ವೈಭವೀಕರಿಸದೆ ತೀರಾ ಸೂಕ್ಷ ವಾಗಿ ಸುದ್ದಿ ಪ್ರಸಾರ ಮಾಡಿದ್ದು, ಜವಾಬ್ದಾರಿಯುತವಾಗಿ ವರ್ತಿಸಿರುವುದು ಉತ್ತಮ ಬೆಳವಣಿಗೆ. ಈ ಬಗ್ಗೆ ಸ್ವತಃ ಶಿವರಾಜ್ ಕುಮಾರ್‌ರವರೂ ಸಮಾಧಾನ ವ್ಯಕ್ತಪಡಿಸಿದ್ದಾರೆ. ಮನುಷ್ಯ ಅಂದ ಮೇಲೆ ಕಾಯಿಲೆ ಬರುವುದು ಸಹಜ. ಮಾಧ್ಯಮ ಅದನ್ನೇ ದೊಡ್ಡ ಸುದ್ದಿಯನ್ನಾಗಿಸಿಕೊಂಡು ಪ್ರಚಾರ ತೆಗೆದುಕೊಳ್ಳುವುದು ಇತ್ತೀಚೆಗೆ ಮಾಮೂಲಿ ಎನ್ನುವಂತಾಗಿದೆ. ಕೆಲವು ತಿಂಗಳ ಹಿಂದೆ ನಿಧನರಾದ ಕನ್ನಡದ ಸುಪ್ರಸಿದ್ಧ ನಿರೂಪಕಿ ಹಾಗೂ ನಟಿ ಅಪರ್ಣಾ ಕೂಡ ಗಂಭೀರವಾದ ಕಾಯಿಲೆಯಿಂದ ಬಳಲುತ್ತಿದ್ದರೂ ಅದರ ಬಗ್ಗೆ ಜನರಿಗೆ ಗೊತ್ತಿರಲಿಲ್ಲ. ಕೆಲವು ಸೂಕ್ಷ ಆರೋಗ್ಯ ಸಮಸ್ಯೆಗಳು ಬಹಿರಂಗಗೊಂಡರೆ ಆ ವ್ಯಕ್ತಿಗಳಿಗೆ ಮಾನಸಿಕವಾಗಿ ಕಿರಿಕಿರಿಯಾಗುತ್ತದೆ. ಈ ವಿಚಾರದಲ್ಲಿ ಮಾಧ್ಯಮದವರು ನಡೆದುಕೊಂಡ ರೀತಿ ಮೆಚ್ಚುವಂತದ್ದು. ಕನ್ನಡಿಗರ ನೆಚ್ಚಿನ ಶಿವಣ್ಣ ಆದಷ್ಟು ಬೇಗ ಚೇತರಿಸಿಕೊಂಡು ಸ್ವದೇಶಕ್ಕೆ ಮರಳುವಂತಾಗಲಿ.
-ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…