ಓದುಗರ ಪತ್ರ
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ ಮಾದರಿಯಾಗಿದೆ.
ಜಾತಿ, ಧರ್ಮ, ಮೇಲು, ಕೀಳು ಎಂಬ ತಾರತಮ್ಯದ ಜೋಪಡಿಯಲ್ಲಿ ಜೀವಿಸುವ ಈ ಅನಿಷ್ಠ ಜಾತಿ ಪದ್ಧತಿಯ ಆಚಾರಕ್ಕೆ ಸೌಂದಾಳ ಗ್ರಾಮಸ್ಥರು ವಿರುದ್ಧವಾಗಿದ್ದಾರೆ. ಗ್ರಾಮದ ಎಲ್ಲಾ ಸಮುದಾಯದವರು ಸೇರಿಕೊಂಡು ನಮ್ಮದು ಒಂದೇ ಜಾತಿ ಅದು ಮನುಷ್ಯ ಜಾತಿ ಎಂಬ ಧೈಯವಾಕ್ಯದೊಂದಿಗೆ ವಿನೂತನ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಯಾವುದೇ ಜಾತಿ ಆಧಾರಿತ ಘಟನೆಗಳು ಮತ್ತು ಪದ್ಧತಿಗಳು ನಡೆದ ರೀತಿಯಲ್ಲಿ ಸರ್ವಾನುಮತದಿಂದ ಗ್ರಾಮಸ್ಥರು ಒಗ್ಗಟ್ಟಾಗಿ ನಿಂತು ಸಂವಿಧಾನದ ಮೂಲ ಆಶಯವೇ ನಮ್ಮ ಬದುಕು ಹಾಗೂ ಸಮಾನತೆ ನಮ್ಮ ಜೀವನದ ಬೆಳಕು ಎಂಬುದನ್ನು ನಿರ್ಣಯಿಸಿದ್ದು, ಸೌಂದಾಳ ಗ್ರಾಮ ಜಾತಿ ಮುಕ್ತ ಮನಸ್ಸುಗಳನ್ನು ಕಟ್ಟಿದೆ.
– ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…