ಓದುಗರ ಪತ್ರ

ಓದಗರ ಪತ್ರ: ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ರಾಜ್ಯ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎನಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರವರ ನಿಧನ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದ.

ಎಸ್. ಎಂ. ಕೃಷ್ಣರವರು ಅಮೆರಿಕದಲ್ಲಿ ಕಾನೂನು ವಿಷಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿಯೇ ಅಂದಿನ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಸ್ಪಽಸಿದ್ದ ಜಾನ್ ಎಫ್. ಕೆನಡಿ ಪರವಾಗಿ ಪ್ರಚಾರ ಕೈಗೊಂಡು ಅವರ ಗೆಲುವಿಗೆ ಕಾರಣರಾಗಿದ್ದರು. ನಂತರ ಭಾರತಕ್ಕೆ ಮರಳಿದ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಅನೇಕ ಮಹತ್ವದ ಖಾತೆಗಳನ್ನು ಅಲಂಕರಿಸಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಿದರು.

ಸುಮಾರು ೬೦ ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನಸಭಾ ಸದಸ್ಯರಾಗಿ, ವಿಧಾನ ಪರಿಷತ್, ವಿಧಾನಸಭಾ ಸ್ಪೀಕರ್ ಆಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ಕೈಗಾರಿಕಾ , ವಿದೇಶಾಂಗ ಸಚಿವರಾಗಿ, ಕರ್ನಾಟಕದ ಮುಖ್ಯ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಂಗಳೂರಿಗೆ ಐಟಿ ಬಿಟಿ ಕಂಪೆನಿಗಳನ್ನು ಪರಿಚಯಿಸಿದ ಹಿರಿಮೆ ಇವರಿಗೆ ಸಲ್ಲುತ್ತದೆ. ಇಂದು ಬೆಂಗಳೂರು ಮಹಾನಗರವಾಗಿ ಬೆಳವಣಿಗೆಯಾಗಿದೆ ಎಂದರೆ ಇವರ ಕೊಡುಗೆ ಅಪಾರ. ಇಂತಹ ಅಪರೂಪದ ರಾಜಕಾರಣಿಯ ಹೆಸರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಇಡುವ ಮೂಲಕ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗಾಣಿಗ ಮಂಗಲ ಆಶ್ರಮ ಶಾಲೆ ಕಟ್ಟಡ ಕಾಮಗಾರಿ ಪೂರ್ಣ

ಮಹಾದೇಶ್ ಎಂ.ಗೌಡ ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ ಹನೂರು: ತಾಲ್ಲೂಕಿನ ಕಾವೇರಿ…

1 min ago

ಜನಾಕರ್ಷಣೆಯ ದಸರಾ ವಸ್ತುಪ್ರದರ್ಶನಕ್ಕೆ ತೆರೆ

ಎಚ್.ಎಸ್.ದಿನೇಶ್ ಕುಮಾರ್ ಲಕ್ಷಾಂತರ ಜನರನ್ನು ಆಕರ್ಷಿಸಿದ ಮನರಂಜನಾ ತಾಣ; ನಿತ್ಯ ಸಾವಿರಾರು ಜನ ವೀಕ್ಷಣೆ ಮೈಸೂರು: ಕಳೆದ ಮೂರು ತಿಂಗಳುಗಳಿಂದ…

5 mins ago

ನಾಣ್ಯ, ಅಂಚೆ ಚೀಟಿಗಳಲ್ಲಿ ಅಂಬೇಡ್ಕರ್ ಅನಾವರಣ!

ಚಿರಂಜೀವಿ ಸಿ. ಹುಲ್ಲಹಳ್ಳಿ ೨೦ ವರ್ಷಗಳಿಂದ ಅಂಚೆ ಚೀಟಿ, ನಾಣ್ಯ ಸಂಗ್ರಹಿಸಿರುವ ಮುಳುಬಾಗಿಲಿನ ಸತೀಶ್ ಮೈಸೂರು: ಬಾಬಾ ಸಾಹೇಬರ ಪ್ರಜ್ಞೆಯ…

11 mins ago

ಸಾಮಾಜಿಕ ಬಹಿಷ್ಕಾರಕ್ಕೆ ಕಾನೂನಿನ ಅಂಕುಶ : ಇಂದಿನಿಂದ ಹೊಸ ನಿಯಮ ಜಾರಿಗೆ

ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…

9 hours ago

ನಾಳೆ ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿಎಂ, ಡಿಸಿಎಂ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…

9 hours ago

ಪ್ರಶ್ನೆ ಪತ್ರಿಕೆ ಸೋರಿಕೆ : ಮುಖ್ಯ ಶಿಕ್ಷಕರು ಸೇರಿ 8 ಮಂದಿ ಬಂಧನ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…

10 hours ago