ಓದುಗರ ಪತ್ರ

ಓದುಗರ ಪತ್ರ | ಸಮ್ಮೇಳನದಲ್ಲಿ ಸ್ಥಳೀಯ ಲೇಖಕರು, ಸಾಹಿತಿಗಳ ನಿರ್ಲಕ್ಷ್ಯ

ಮಂಡ್ಯದಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಹಳಷ್ಟು ಸ್ಥಳೀಯ ಲೇಖಕರು ಹಾಗೂ ಸಾಹಿತಿಗಳನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ.

ಸಮ್ಮೇಳನಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಲೇಖಕರು ಹಾಗೂ ಸಾಹಿತಿಗಳನ್ನು ಒಗ್ಗೂಡಿಸಿ ಸಲಹಾ ಸಮಿತಿ ಸಭೆಯನ್ನು ನಡೆಸಲಾಯಿತು. ಆ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದವರ ಸಹಿ ಹಾಗೂ ಸಂಪೂರ್ಣ ವಿಳಾಸಗಳನ್ನು ಸಂಗ್ರಹಿಸಲಾಗಿತ್ತು. ಸಮ್ಮೇಳನಕ್ಕೆ ಆಹ್ವಾನಿಸದ ಮೇಲೆ ಅವರೊಂದಿಗೆ ಸಭೆ ನಡೆಸಿದ ಉದ್ದೇಶವಾದರೂ ಏನು? ಕೋಟ್ಯಂತರ ರೂ. ವ್ಯಯಿಸಿ ಸಮ್ಮೇಳನ ಮಾಡಿ, ಸ್ಥಳೀಯ ಸಾಹಿತಿ ಹಾಗೂ ಲೇಖಕರಿಗೆ ಆಹ್ವಾನ ನೀಡಿಲ್ಲ ಎಂದಾದರೆ ಸಮ್ಮೇಳನ ಅಪೂರ್ಣ ಎಂದರ್ಥ. ಕಾರ್ಯಕ್ರಮದಲ್ಲಿ ಕೆಲ ಆಯ್ದ ಸಾಹಿತಿಗಳಿಗೆ ಮಾತ್ರ ಆಹ್ವಾನ ನೀಡಿದ್ದು, ಇತರೆ ಸಾಹಿತಿಗಳಿಗೆ ಬೇಸರ ತಂದಿದೆ. -ಸಿ. ಸಿದ್ದರಾಜು, ಆಲಕೆರೆ, ಮಂಡ್ಯ

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲಿಗೆ ತಿರುಗೇಟು ಕೊಟ್ಟ ಸಿ.ಟಿ.ರವಿ

ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ…

39 mins ago

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಫೋಟಕ ಹೇಳಿಕೆ…

1 hour ago

ಬಿ.ಎಲ್.ಸಂತೋಷ್ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ

ಬೆಂಗಳೂರು: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೆಚ್ಚುಗೆ…

1 hour ago

ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್…

2 hours ago

ತಟ್ಟಕೆರೆಯಲ್ಲಿ ಮೂರು ಪೆರ್ಪಣ ಪತ್ತೆ

ಕೊಡಗು: ಇಂದು ಬೆಳಿಗ್ಗೆ ನಿಟ್ಟೂರು ತಟ್ಟಕೇರಿಯ ಕಾಫಿ ತೋಟದಲ್ಲಿ ರಾಜನ್ ಎಂಬುವವರು ಹುಲಿ ದಾಳಿಗೆ ಒಳಗಾಗಿದ್ದರು ಎಂದು ಹೇಳಲಾದ ಪ್ರಕರಣ…

2 hours ago

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹಾಗೂ ಕಲ್ಲಿನಿಂದ ದಾಳಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.…

2 hours ago