Mysore
22
broken clouds

Social Media

ಬುಧವಾರ, 25 ಡಿಸೆಂಬರ್ 2024
Light
Dark

ಓದುಗರ ಪತ್ರ | ಒಂದು ದೇಶ ಒಂದು ಚುನಾವಣೆ: ಒಮ್ಮತ ಮೂಡಲಿ

ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದ್ದು, ೨೬೯ ಸದಸ್ಯರ ಬೆಂಬಲ ದೊರಕಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಏಕ ಕಾಲಕ್ಕೆ ನಡೆಸುವ ಮಹತ್ವದ ಯೋಜನೆ ಇದಾಗಿದ್ದು, ಇದಕ್ಕೆ ಸಹಜವಾಗಿಯೇ ಪ್ರಬಲ ಪತ್ರಿಪಕ್ಷವಾದ ಕಾಂಗ್ರೆಸ್ ಸೇರಿದಂತೆ ಕೆಲ ವಿಪಕ್ಷಗಳು ವಿರೋಧಿಸುವ ಮೂಲಕ ಇದೊಂದು ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯೋಜನೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿವೆ.

ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಸರ್ಕಾರಕ್ಕೆ ಚುನಾವಣಾ ವೆಚ್ಚ ಕಡಿಮೆಯಾಗುತ್ತದೆ. ಅಲ್ಲದೆ ರಾಜಕೀಯ ಪಕ್ಷಗಳಿಗೆ ಪ್ರಚಾರದ ವೆಚ್ಚವನ್ನೂ ತಗ್ಗಿಸುತ್ತದೆ. ಈ ಚುನಾವಣಾ ವ್ಯವಸ್ಥೆಯನ್ನು ಜಾರಿ ಮಾಡುವ ಮುನ್ನ ಚುನಾವಣಾ ಚಕ್ರಗಳ ಮರು ಹೊಂದಾಣಿಕೆ ಮತ್ತು ಕಾನೂನುಬದ್ಧ ಚೌಕಟ್ಟು ರೂಪಿಸುವುದು ಅವಶ್ಯ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags: