Mysore
19
overcast clouds
Light
Dark

ಓದುಗರ ಪತ್ರ | ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಬರೆಯಬೇಕಿತ್ತು. ಇದರಿಂದಾಗಿ ರೈಲ್ವೆ ಇಲಾಖೆಯ ಬಹುತೇಕ ಹುದ್ದೆಗಳು ಉತ್ತರ ಭಾರತದ ಅಭ್ಯರ್ಥಿಗಳ ಪಾಲಾಗುತ್ತಿದ್ದವು. ಈಗ ಸಚಿವ ವಿ. ಸೋಮಣ್ಣರವರು ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ತಿಳಿಸಿರುವುದು ಕರ್ನಾಟಕದ ಉದ್ಯೋಗಾಂಕ್ಷಿಗಳಲ್ಲಿ ಆಶಾಕಿರಣ ಮೂಡಿಸಿದಂತಿದೆ. ಇದರೊಂದಿಗೆ ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ‘ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನೂ ಕನ್ನಡದಲ್ಲಿ ನಡೆಸುವಂತೆ ರೈಲ್ವೆ ಮಂಡಳಿಗೆ ಸುತ್ತೋಲೆ ಹೊರಡಿಸಲು ಆದೇಶ ನೀಡಿರುವುದು ಸಂತಸದ ವಿಚಾರ. ಈ ಕ್ರಮದಿಂದಾಗಿ ಮುಂದಿನ ದಿನಗಳಲ್ಲಿ ಕರ್ನಾಟಕದ ಹೆಚ್ಚಿನ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಅವಕಾಶವಾದಂತಾಗಿದ್ದು, ಈ ಆದೇಶ ನೀಡಿದ ಸಚಿವ ವಿ.ಸೋಮಣ್ಣನವರಿಗೆ ಧನ್ಯವಾದಗಳು.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.