ಓದುಗರ ಪತ್ರ

ಓದುಗರ ಪತ್ರ | ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಬರೆಯಬೇಕಿತ್ತು. ಇದರಿಂದಾಗಿ ರೈಲ್ವೆ ಇಲಾಖೆಯ ಬಹುತೇಕ ಹುದ್ದೆಗಳು ಉತ್ತರ ಭಾರತದ ಅಭ್ಯರ್ಥಿಗಳ ಪಾಲಾಗುತ್ತಿದ್ದವು. ಈಗ ಸಚಿವ ವಿ. ಸೋಮಣ್ಣರವರು ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ತಿಳಿಸಿರುವುದು ಕರ್ನಾಟಕದ ಉದ್ಯೋಗಾಂಕ್ಷಿಗಳಲ್ಲಿ ಆಶಾಕಿರಣ ಮೂಡಿಸಿದಂತಿದೆ. ಇದರೊಂದಿಗೆ ಇಲಾಖೆಯಲ್ಲಿ ಬಡ್ತಿ ನೀಡಲು ನಡೆಸುವ ‘ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆ ಗಳನ್ನೂ ಕನ್ನಡದಲ್ಲಿ ನಡೆಸುವಂತೆ ರೈಲ್ವೆ ಮಂಡಳಿಗೆ ಸುತ್ತೋಲೆ ಹೊರಡಿಸಲು ಆದೇಶ ನೀಡಿರುವುದು ಸಂತಸದ ವಿಚಾರ. ಈ ಕ್ರಮದಿಂದಾಗಿ ಮುಂದಿನ ದಿನಗಳಲ್ಲಿ ಕರ್ನಾಟಕದ ಹೆಚ್ಚಿನ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಅವಕಾಶವಾದಂತಾಗಿದ್ದು, ಈ ಆದೇಶ ನೀಡಿದ ಸಚಿವ ವಿ.ಸೋಮಣ್ಣನವರಿಗೆ ಧನ್ಯವಾದಗಳು.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

15 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

18 mins ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

21 mins ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

3 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

3 hours ago